Views: 0
ಧಾರವಾಡ ಮೇ 30:
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಪ್ರಾರಂಭಿಸಲು 240 ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅನುಕೂಲವಾಗುವಂತಹ ಎಲ್ಲ ಸೌಲಭ್ಯಗಳನ್ನು ಒಳಗೊಂಡಿರುವ ಬಾಡಿಗೆ ಕಟ್ಟಡ ಅವಶ್ಯಕವಿದೆ. ಕಟ್ಟಡವನ್ನು ಬಾಡಿಗೆ ನೀಡಲು ಆಸಕ್ತಿವುಳ್ಳವರು ಜೂನ್ 06, 2024 ರೊಳಗಾಗಿ ಧಾರವಾಡ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಅರ್ಜಿ ಸಲ್ಲಿಸಬಹುದು.
ಮತ್ತು 2024-25 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲು ಎಲ್ಲ ಸೌಲಭ್ಯಗಳನ್ನು ಒಳಗೊಂಡಿರುವ ಬಾಡಿಗೆ ಕಟ್ಟಡ ಅವಶ್ಯಕವಿದೆ. ಕಟ್ಟಡವನ್ನು ಬಾಡಿಗೆ ನೀಡಲು ಆಸಕ್ತಿವುಳ್ಳವರು ಜೂನ್ 10, 2024 ರೊಳಗಾಗಿ ಧಾರವಾಡ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 0836-2971590 ಅರಿವು ಕೇಂದ್ರ: 0836- 2971132 ಗೆ ಅಥವಾ ಮೌಲಾನಾ ಆಝಾದ ಭವನ, ಸಾಧನಕೇರಿ ರಸ್ತೆ, ಸರ್ಕಾರಿ ಮುದ್ರಣಾಲಯ ಹತ್ತಿರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೋಪಾಲ ಎಚ್.ಲಮಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.