ಬಳ್ಳಾರಿ,ಜು.20
ಕುಷ್ಠರೋಗ ಪತ್ತೆಹಚ್ಚುವ ಅಭಿಯಾನ-2024ರ ಪೂರ್ವಭಾವಿ ಸಭೆಯನ್ನು ಜು.23 ರಂದು ಮದ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಅವರು ತಿಳಿಸಿದ್ದಾರೆ,.
ಜಿಲ್ಲೆಯ ಬಳ್ಳಾರಿ, ಸಿರುಗುಪ್ಪ, ಸಂಡೂರು ತಾಲ್ಲೂಕುಗಳಲ್ಲಿ ಜು.29 ರಿಂದ ಆ.14ರ ವರೆಗೆ ಕುಷ್ಠರೋಗ ಪತ್ತೆಹಚ್ಚುವ ಅಭಿಯಾನ-2024 ಕಾರ್ಯಕ್ರಮ ಆಯೋಜಿಸಲಾಗಿದೆ.
ಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಭಾಗವಹಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.