ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 6
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ ರಾಂ ರವರ 38 ನೇ ಪುಣ್ಯಸ್ಮರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿಂದು ಆಚರಿಸಲಾಯಿತು.
ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಡಾ.ಬಾಬು ಜಗಜೀವನ ರಾಂ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿ.ಪಂ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಜಿ.ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮಾ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.