ಜಗಜೀವನ ರಾಂ ಅವರು ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದ ಮಹಾನ್ ವ್ಯಕ್ತಿ – ಮುಖ್ಯಮಂತ್ರಿ ಸಿದ್ದರಾಮಯ್ಯ

0
44
Share this Article
0
(0)
Views: 3

ಬೆಂಗಳೂರು, ಜುಲೈ 06

ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿರುವ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಅವರು ಇಂದು ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಪಶ್ಚಿಮ ದ್ವಾರದ ಬಳಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ದೇಶದಲ್ಲಿ ತೀವ್ರ ಆಹಾರದ ಕೊರತೆಯುಂಟಾಗಿ, ಬೇರೆ ದೇಶಗಳ ಮುಂದೆ ಬೇಡಬೇಕಾದ ಪರಿಸ್ಥಿತಿ ಇತ್ತು. ಹೊಸ ತಳಿಗಳ ಅಭಿವೃದ್ದಿ ಸೇರಿದಂತೆ ಹಲವು ಕ್ರಮಗಳ ಮೂಲಕ ಜಗಜೀವನರಾಂ ಅವರು ದೇಶಕ್ಕೆ ಆಹಾರ ಭದ್ರತೆಯನ್ನು ಒದಗಿಸಿದರು. ರಕ್ಷಣಾ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದರೂ, ದಕ್ಷ ಆಡಳಿತ ನೀಡಿದ್ದಾರೆ. ಕಾರ್ಮಿಕರ ಪರವಾಗಿ ಅನೇಕ ಕಾಯ್ದೆಗಳನ್ನು ರಚಿಸಿದ ಕೀರ್ತಿ ಅವರದು. ಬಡವರು, ರೈತರು, ಕೂಲಿ ಕಾರ್ಮಿಕರ ಪರವಾಗಿ ನಿರಂತರವಾಗಿ ಅವರು ಹೋರಾಟ ನಡೆಸಿದ್ದಾರೆ. ಅವರು ತೋರಿದ ಹಾದಿಯಲ್ಲಿ ನಡೆಯುವ ಸಂಕಲ್ಪವನ್ನು ಈ ದಿನ ನಾವು ಮಾಡಬೇಕಾಗಿದೆ ಎಂದರು.

ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ.ಬಾಬು ಜಗಜೀವನರಾಂ ಭವನವನ್ನು ಜುಲೈ 13ರಂದು ಲೋಕಾರ್ಪಣೆ ಮಾಡಲಾಗುವುದು. ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಈ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿತ್ತು. ಅರ್ಹ ಅಭ್ಯರ್ಥಿಗಳಿಗೆ ವಿಜ್ಞಾನ, ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಸಹ ಈ ಭವನದಲ್ಲಿ ಒದಗಿಸಲಾಗುವುದು ಎಂದರು.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here