ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 13
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ತಿರುಮಲ ಶೆಟ್ಟಿಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು ಸೆಕ್ಷನ್ 4 ರ ಅಡಿಯಲ್ಲಿ 15 ಪ್ರಕರಣಗಳನ್ನು ದಾಖಲಿಸಿ 2800 ರೂಗಳ ದಂಡವನ್ನು ಸಂಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ. ವಿದ್ಯಾರಾಣಿ ಪಿ.ಎಸ್, ತಾಲ್ಲೂಕು ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿ ರವಿಕುಮಾರ್, ಸಮಾಜ ಸೇವಕ ವೆಂಕಟೇಶ್, ನಿರೀಕ್ಷಣಾಧಿಕಾರಿ ಆನಂದ್, ತಿರುಮಲ ಶೆಟ್ಟಿಹಳ್ಳಿ ಪೋಲಿಸ್ ಸಿಬ್ಬಂದಿ ಉಪಸ್ಥಿತರಿದ್ದರು.