Views: 0
ಧಾರವಾಡ ಮೇ.30:
ಜೂ.4 ಮತ ಎಣಿಕೆಯು ಸುಗಮವಾಗಿ ಮತ್ತು ಮುಕ್ತವಾಗಿ ಜರಗಿಸುವ ಹಿತದೃಷ್ಠಿಯಿಂದ ಜೂನ್ 2, ರಿಂದ ಜೂನ್ 5, 2024 ರವರೆಗೆ ಕೃವಿವಿಯ ಮತ ಏಣಿಕೆ ಕೇಂದ್ರದ ಸುತ್ತ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ
ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಲೋಕಸಭಾ ಸಾರ್ವತ್ರಿಕ ಚುಣಾವಣೆ ಮೇ 7 ರಂದು ಜರುಗಿದ್ದು, ಜೂ.4 ರಂದು ಮತ ಎಣಿಕೆ ಜರುಗುವ ಹಿನ್ನೆಲೆಯಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ 200 ಮೀಟರ್ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದ್ದಾರೆ.
ಜೂನ್ 4 ರಂದು ಮತ ಏಣಿಕೆ ಇರುವುದರಿಂದ ಜಿಲ್ಲೆಯ ಕೃವಿವಿಯ ಮತ ಏಣಿಕೆ ಕೇಂದ್ರದ ವ್ಯಾಪ್ತಿಯ 200 ಮೀಟರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಜೂನ್ 2, 2024 ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 5, 2024 ರ ಸಂಜೆ 6 ಗಂಟೆಯವರೆಗೆ ಸಿ.ಆರ್.ಪಿ.ಸಿ 1973 ರ ಕಲಂ 144 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ, ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದ್ದಾರೆ.
ಮತ ಎಣಿಕೆಯ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯಾಗಿ ಮತ್ತು ಮತದಾನದ ಪ್ರಾವಿತ್ರ್ಯತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಸಿ.ಆರ್.ಪಿ.ಸಿ 1973 ರ ಕಲಂ 144 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರ ಮೇರೆಗೆ ಪ್ರತಿಬಂಧಕಾಜ್ಞೆ ವಿಧಿಸಿದೆ, ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶದಲ್ಲಿ ತಿಳಿಸಿದ್ದಾರೆ.