ಪರಿಶಿಷ್ಟ ಜಾತಿ ಯುವಕ/ಯುವತಿಯರಿಗೆ ಜಿಮ್ ಫಿಟ್ನೆಸ್ ತರಬೇತಿ, ಬ್ಯೂಟೀಷಿಯನ್ ತರಬೇತಿ, ಚಾಟ್ಸ್ ತಯಾರಿಕೆ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆ,
ಸೆಪ್ಟೆಂಬರ್ 06
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಯುವಜನರನ್ನು ಸ್ವಾವಲಂಭಿಯಾಗಿಸುವ ದೃಷ್ಟಿಯಿಂದ ಪರಿಶಿಷ್ಟ ಜಾತಿ ಯುವಕ/ಯುವತಿಯರಿಗೆ ಜಿಮ್ ಫಿಟ್ನೆಸ್ ತರಬೇತಿ ಶಿಬಿರ, ಬ್ಯೂಟೀಷಿಯನ್ ತರಬೇತಿ ಶಿಬಿರ ಹಾಗೂ ಚಾಟ್ಸ್ ತಯಾರಿಕೆ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಯುವಜನರು ಸೆಪ್ಟೆಂಬರ್ 09 ರಿಂದ ಸೆಪ್ಟೆಂಬರ್ 18 ರ ಒಳಗಾಗಿ ಕಛೇರಿ ಅವಧಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಸಹಾಯಕ ನಿರ್ದೇಶಕ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಕೊಠಡಿ ಸಂ 112 ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬಹುದಾಗಿದೆ.
ತರಬೇತಿ ಪಡೆಯಲು ಬೇಕಾದ ಅರ್ಹತೆಗಳು
ತರಬೇತಿಯನ್ನು ಕರ್ನಾಟಕದ ಯುವಕ/ ಯುವತಿಯರಿಗೆ ಮಾತ್ರ ನೀಡಲಾಗುವುದು. ಅರ್ಜಿದಾರರು ದೈಹಿಕವಾಗಿ ಸದೃಢರಾಗಿರಬೇಕು. ಯುವಕ/ಯುವತಿಯರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
ಅರ್ಜಿದಾರರು ಕಡ್ಡಾಯವಾಗಿ ಆರ್.ಡಿ ಸಂಖ್ಯೆಯಿರುವ ಜಾತಿ ಪ್ರಮಾಣ ಪತ್ರ ಲಗತ್ತಿಸಿರಬೇಕು, ಅರ್ಜಿದಾರರ ಹೆಸರು ಹಾಗೂ ಭಾವಚಿತ್ರವುಳ್ಳ ಆಧಾರ್ ಪತ್ರವನ್ನು ಲಗತ್ತಿಸುವುದು. ಜಿಮ್ ಫಿಟೈಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗಳಿಗೆ ಕನಿಷ್ಠ ವಿದ್ಯಾರ್ಹತೆ 10ನೇ ತರಗತಿ ಪಾಸ್/ಫೇಲ್ ಶಿಕ್ಷಣವನ್ನು ಹೊಂದಿರಬೇಕು (ದೃಢೀಕೃತ ಅಂಕಪಟ್ಟಿಯ ಪ್ರತಿಯನ್ನು ಲಗತ್ತಿಸುವುದು). ಅರ್ಜಿದಾರರು 18 ರಿಂದ 40 ವರ್ಷದೊಳಗಿನ ಯುವಕ/ಯುವತಿಯರು ಮಾತ್ರ ಭಾಗವಹಿಸಲು ಅರ್ಹರು, ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳು ಶಿಸ್ತು ಹಾಗೂ ಸಂಯಮದಿಂದ ಇರಬೇಕು, ಅನುಚಿತವಾಗಿ ವರ್ತಿಸಿದಲ್ಲಿ ಇಲಾಖೆಯ ನಿಯಾಮಾನುಸಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಅರ್ಜಿದಾರರ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ಉಪ/ಸಹಾಯಕ ನಿರ್ದೇಶಕರಿಂದ ದೃಢೀಕರಿಸಿ ಸಲ್ಲಿಸಬೇಕು, ತರಬೇತಿ ಶಿಬಿರದಲ್ಲಿ ಭಾಗವಹಿಸುವ ಯುವಕ/ಯುವತಿಯರಿಗೆ ಲಘು ಉಪಹಾರ ನೀಡಲಾಗುವುದು. ಹೊರ ಜಿಲ್ಲೆಗಳಿಂದ ಆಗಮಿಸುವ ಶಿಬಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಛೇರಿಯ ಸಹಾಯಕರು / ಕಛೇರಿ ದೂರವಾಣಿ ಸಂಖ್ಯೆ 9632778567 ಮತ್ತು 080-29787443 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.