ಅಂತರಾಷ್ಟ್ರೀಯ ಮಾದಕ ವಸ್ತುವಿನ ವಿರೋಧಿ ದಿನಾಚರಣೆ ಪ್ರಯುಕ್ತ ಮಾದಕ ವಸ್ತುವಿನ ವ್ಯಸನವನ್ನು ತಡೆಗಟ್ಟುವ ಕುರಿತು ಕಾರ್ಯಾಗಾರ
ದಾವಣಗೆರೆ .ಜೂ.24; ಜೂನ್ 26 ರಂದು ಬೆಳಿಗ್ಗೆ 11 ಗಂಟೆಗೆ ದೊಡ್ಡಬಾತಿಯ ತಪೋವನದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುವಿನ ವಿರೋಧಿ ದಿನಾಚರಣೆಯ ಪ್ರಯುಕ್ತ ಮಾದಕ ವಸ್ತುವಿನ ವ್ಯಸನವನ್ನು ತಡೆಗಟ್ಟುವ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ ಕರ್ನಾಟಕ(ಪ್ರಾಯೋಜಿತ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ-ನವದೆಹಲಿ), ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಪೋವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ತಪೋವನ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ತಪೋವನ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ದಾವಣಗೆರೆ ಇವರ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಉದ್ಘಾಟಿಸುವರು. ರಾಜ್ಯ ಮಟ್ಟದ ಸಮನ್ವಯ ಸಂಸ್ಥೆಯ ನಿರ್ದೇಶಕರು ಹಾಗೂ ತಪೋವನ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ.ಶಶಿಕುಮಾರ್.ವಿ ಮೆಹರ್‍ವಾಡೆ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ.ಪ್ರಕಾಶ್, ತಪೋವನ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ.ಅಶ್ವಿನಿ ಕೆ.ಆರ್, ತಪೋವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ.ಸುಮನಾ ಭಟ್, ತಪೋವನ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಪ್ರಾಂಶುಪಾಲರಾದ ಶೈಲಜಾ.ಬಿ.ಆರ್ ಭಾಗವಹಿಸುವರು.