Views: 1
ಧಾರವಾಡ ಮೇ.30:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ರಾಷ್ಟ್ರಿಯ ಸೇವಾ ಯೋಜನಾ ಘಟಕ, ಕರ್ನಾಟಕ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಕರ್ನಾಟಕ ಕಾಲೇಜು ಇವರ ಸಹಭಾಗಿತ್ವದಲ್ಲಿ ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು ಎಂಬ ಘೋಷವಾಕ್ಯದಡಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಮೇ 31, 2024 ರಂದು ಬೆಳಿಗ್ಗೆ 9.30 ಗಂಟೆಗೆ ಕೆ.ಸಿ.ಡಿ ಕಾಲೇಜಿನ ಬಿ.ಬಿ.ಎ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್. ದೊಡ್ಡಮನಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುರೇಶ ಹಾಗೂ ಧಾರವಾಡ ಕರ್ನಾಟಕ ಕಾಲೇಜಿನ ಕರ್ನಾಟಕ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಕರಡೋಣಿ.ಡಿ.ಬಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪಾಟೀಲ ಶಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು.
ಅತಿಥಿಗಳಾಗಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಸುಜಾತಾ ಹಸವಿಮಠ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಶ ಚಿತ್ತರಗಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಮಂಜುನಾಥ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ರವೀಂದ್ರ ಬೊವೇರ, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ.ಎಸ್.ಬಿ.ಕಳಸೂರಮಠ, ತಾಲೂಕಾ ಆರೋಗ್ಯಾಧಿಕಾರಿ ಡಾ. ತನುಜಾ ಕೆ.ಎನ್. ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಎನ್.ಎಮ್.ಎಚ್.ಪಿ ಮನೋವೈದ್ಯ ಡಾ. ರಾಘವೇಂದ್ರ ಪಾಟೀಲ ಹಾಗೂ ಎನ್.ಟಿ.ಸಿ.ಪಿ ಸಲಹೆಗಾರ ಎಮ್.ಐ. ಕಲ್ಲಪ್ಪನವರ ಅವರು ಉಪನ್ಯಾಸ ನೀಡುವರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪಾಟೀಲ ಶಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.