ಬೆಂಗಳೂರು:
ಯಲಹಂಕ ವಲಯ ವ್ಯಾಪ್ತಿಯಲ್ಲಿ ಇ-ಖಾತಾ, ತ್ಯಾಜ್ಯ ವಿಲೇವಾರಿ, ಬೀದಿ ದೀಪಗಳ ಅಳವಡಿಕೆ, ಕುಡಿಯುವ ನೀರು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್* ಬಳಿ ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಿದರು.
ಯಲಹಂಕ ವಲಯ ಕಛೇರಿಯಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 33ಕ್ಕೂ ಹೆಚ್ಚು ದೂರುಗಳು ಬಂದಿದ್ದು, ಬಂದಿರುವ ಸಮಸ್ಯೆಗಳ ಅನ್ವಯ ಕಾಲಮಿತಿಯೊಳಾಗಿ ದೂರುಗಳನ್ನು ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರೊಬ್ಬರು ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ ಈ ಹಿಂದೆ ವಾರ್ಡ್ ಕಮಿಟಿ ಸಭೆ ನಡೆಸಲಾಗುತ್ತಿತ್ತು, ಅದರಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಇತ್ಯರ್ಥಪಡಿಸಿಕೊಳ್ಳಬಹುದಿತ್ತು. ಆದ್ದರಿಂದ ವಾರ್ಡ್ ಕಮಿಟಿ ಸಬೆಗಳನ್ನು ಸರಿಯಾಗಿ ನಡೆಸಲು ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿ, ಇದೀಗ ಪಾಲಿಕೆಯ ಎಲ್ಲಾ ವಾರ್ಡ್ಗಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುತ್ತಿದ್ದು, ಅವರ ಬಳಿ ತಮ್ಮ ದೂರುಗಳನ್ನು ಹೇಳಿ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.
ಮನೆ ಖರೀದಿ ಮಾಡುವ ಸಲುವಾಗಿ ಅಂತಿಮ ಇ-ಖಾತಾ ಪಡೆಯಲು ಸಾಕಷ್ಟು ಸಮಸ್ಯೆಯಾಗುತ್ತಿದ್ದು, ಅದನ್ನು ಬಗೆಹರಿಸಿಕೊಡಲು ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿ, ಅಂತಿಮ ಇ-ಖಾತಾ ನೀಡುವ ವಿಚಾರವಾಗಿ ವಲಯ ಜಂಟಿ ಆಯುಕ್ತರು ವಾರದೊಳಗಾಗಿ ಸಮಸ್ಯೆ ಬಗೆಹರಿಸಿ ಇ-ಖಾತಾ ನೀಡಲು ಕ್ರಮವಹಿಸಲು ಸೂಚನೆ ನೀಡಿದರು.
*3.5 ಲಕ್ಷ ರೂ. ಪರಿಹಾರ ನೀಡಲು ಸೂಚನೆ:*
ಸರ್ವೀಸ್ ರಸ್ತೆಯಲ್ಲಿ ಮರದ ಕೊಂಬೆ ಬಿದ್ದು, ವ್ಯಕ್ತಿಯ ಬುಜಕ್ಕೆ ಪೆಟ್ಟಾಗಿ ಸುಮಾರು 6 ಲಕ್ಷ ರೂ. ವೈದ್ಯಕೀಯ ವೆಚ್ಚವಾಗಿದ್ದು, ವೈದ್ಯಕೀಯ ಕಾಯ್ದೆ ಪ್ರಕಾರ 3.5 ಲಕ್ಷ ರೂ. ನೀಡಲು ಕ್ರಮ ವಹಿಸಲಾಗುತ್ತಿದ್ದು, ಅದನ್ನು ಕೂಡಲೆ ಅವರ ಖಾತೆಗೆ ಜಮೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರಿಂದ ಬಂದ ಪ್ರಮುಖ ಅಹವಾಲುಗಳ ವಿವರ:
1. ಕಾವೇರಿ ನೀರು ಸಂಪರ್ಕ ಕೊಡಿಸಲು ಮನವಿ
2. ಒಂಟಿ ಮನೆಗೆ ಅರ್ಜಿ ಸಲ್ಲಿಸಿದ್ದು, ಅನುದಾನ ಬಿಡುಗಡೆ ಮಾಡಲು ಮನವಿ
3. ಮನೆ ಖರೀದಿ ಮಾಡುತ್ತಿದ್ದು, ಇ-ಖಾತಾ ಪಡೆಯಲು ಸಮಸ್ಯೆಯಾಗುತ್ತಿದೆ. ತ್ವರಿತವಾಗಿ ಇ-ಖಾತಾ ವ್ಯವಸ್ಥೆ ಮಾಡಲು ಮನವಿ.
4. ರಸ್ತೆ ಬದಿ ಕಸ ಬಿಸಾಡುವ ಸಮಸ್ಯೆ ಹೆಚ್ಚಾಗಿದ್ದು, ಅದನ್ನು ನಿಯಂತ್ರಿಸಲು ಮನವಿ.
5. ಸಹಕಾರ ನಗರದಲ್ಲಿ ಡ್ರೆöÊನ್ ಮಾಡಿಕೊಡಲು ಮನವಿ.
6. ರಸ್ತೆ ಮೇಲೆ ಕೊಳಚೆ ನೀರು ತುಂಬಿ ಹರಿಯುತ್ತಿದ್ದು, ಆ ಸಮಸ್ಯೆಯನ್ನು ಬಗೆಹರಿಸಲು ಮನವಿ.
7. ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಮನವಿ
8. ಮರದ ಕೊಂಬೆಗಳು ರಸ್ತೆಗೆ ಬಂದಿದ್ದು,ವಾಹನಗಳ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ಅದನ್ನು ಕಟಾವು ಮಾಡಲು ಮನವಿ.
9. ದಾಸರಹಳ್ಳಿ ಮುಖ್ಯ ರಸ್ತೆಯಲ್ಲಿ ಪಾದಚಾರಿ ಒತ್ತುವರಿ ಹಾಗೂ ರಸ್ತೆ ಬದಿ ಪಾರ್ಕಿಂಗ್ ಮಾಡುವುದನ್ನು ನಿಯಂತ್ರಿಸಲು ಮನವಿ.
10. ಟಾಟಾ ನಗರ ವ್ಯಾಪ್ತಿಯಲ್ಲಿ ರಾಜಕಾಲುವೆಯಲ್ಲಿ ಹೂಳೆತ್ತಲು ಮನವಿ.
11. ಕೊಡಿಗೆಹಳ್ಳಿ ವ್ಯಾಪ್ತಿಯಲ್ಲಿ ರಾಜಕಾಲುವೆ ಮೇಲೆ ಮನೆ ನಿರ್ಮಾಣ ಮಾಡಿದ್ದು, ಅದನ್ನು ತೆರವುಗೊಳಿಸಲು ಮನವಿ.
12. ಹಸಿ, ಒಣ ತ್ಯಾಜ್ಯ ವಿಂಗಡಣೆ ಮಾಡುವುದನ್ನು ಸರಿಯಾಗಿ ಅಸ್ತಿತ್ವಕ್ಕೆ ತರಲು ಮನವಿ.
ಈ ವೇಳೆ ವಲಯ ಆಯುಕ್ತರಾದ ಕರೀಗೌಡ, ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್, ಉಪ ಆಯುಕ್ತರಾದ ಮಮತಾ, ಮುಖ್ಯ ಅಭಿಯಂತರರಾದ ರಂಗನಾಥ್, ಪಾಲಿಕೆ, ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.