ಲೋಕಸಭೆ ಚುನಾವಣೆ ಮತದಾನ: ರಾಜ್ಯ ಮಟ್ಟದ ಛಾಯಾ ಚಿತ್ರಸ್ಪರ್ಧೆ ವಿಜೇತರು

0
41
Share this Article
0
(0)
Views: 3

ಬೆಂಗಳೂರು, ಮೇ 28:

ಸಾರ್ವತ್ರಿಕ ಲೋಕಸಭಾ ಚುನಾವಣೆ – 2024 ರ ಮತದಾನ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತದಲ್ಲಿ ಜರುಗಿತ್ತು. ಜಗತ್ತಿನ ಅತಿದೊಡ್ಡ ಪ್ರಜಾಪಭುತ್ವ ದೇಶವಾಗಿರುವ ನಮ್ಮ ಭಾರತದಲ್ಲಿ ಚುನಾವಣೆಯನ್ನು ‘ಪ್ರಜಾಪ್ರಭುತ್ವದ ಹಬ್ಬ’ದಂತೆ ಆಚರಿಸಲಾಗುತ್ತಿದ್ದು, ಮಾಧ್ಯಮಗಳಲ್ಲಿ ಕಾರ್ಯನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಛಾಯಾಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾದವರನ್ನು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಘೋಷಿಸಲಾಗಿದೆ.

ಪ್ರಜಾವಾಣಿ/ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆಯ ಮಂಗಳೂರು ಛಾಯಾಗ್ರಾಹಕ ಹೆಚ್.ಫಕ್ರುದ್ಧೀನ್ ಪ್ರಥಮ, ಬಾಗಲಕೋಟೆಯ ಹಳ್ಳಿ ಸಂದೇಶ ಪತ್ರಿಕೆಯ ಇಂದ್ರಕುಮಾರ್ ಬಿ ದಸ್ತೇನವರ ದ್ವೀತಿಯ, ಮೂಡಬಿದಿರೆಯ ಹವ್ಯಾಸಿ ಛಾಯಾಗ್ರಾಹಕ ಜಿನೇಶ್ ಪ್ರಸಾದ್ ತೃತೀಯ, ಸಮಾಧಾನಕರ ಬಹುಮಾನಕ್ಕೆ ಇಬ್ಬರು ಆಯ್ಕೆಯಾಗಿದ್ದು, ಉಡುಪಿಯ ಉದಯವಾಣಿ ಪತ್ರಿಕೆಯ ಅಸ್ಟ್ರೋ ಮೋಹನ್ ಹಾಗೂ ಬೆಂಗಳೂರಿನ ಸಂಜೆ ಸಮಯ ಪತ್ರಿಕೆಯ ಶ್ರೀಮತಿ ಪೂರ್ಣಿಮ ರವಿ ಆಯ್ಕೆಯಾಗಿದ್ದಾರೆ. ವಿಶೇಷ ಬಹುಮಾನಕ್ಕೆ ಮೈಸೂರಿನ ವಿಜಯವಾಣಿ ಪತ್ರಿಕೆಯ ಕೆ.ಹೆಚ್ ಚಂದ್ರು ಹಾಗೂ ಕಲಬುರಗಿಯ ವಿಜಯ ಕರ್ನಾಟಕ ಪತ್ರಿಕೆಯ ಶಿವಶರಣಪ್ಪ ಬೆನ್ನೂರ್ ಅವರು ಆಯ್ಕೆಯಾಗಿದ್ದು, ವಿಜೇತರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತದೆ.

ರಾಜ್ಯಮಟ್ಟದ ಈ ಛಾಯಾಚಿತ್ರ ಸ್ಪರ್ಧೆಯ ಆಯ್ಕೆ ಸಮಿತಿಯಲ್ಲಿ ಅಧ್ಯಕ್ಷರಾಗಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಮಾಧ್ಯಮ ವಿಭಾಗದ ವಿಶೇಷ ಅಧಿಕಾರಿ ಎ.ವಿ.ಸೂರ್ಯಸೇನ್, ಐ.ಎಫ್.ಎಸ್, ಸದಸ್ಯರಾಗಿ ರಾಜ್ಯಮಟ್ಟದ ಸ್ವೀಪ್ ಹಿರಿಯ ಸಮಾಲೋಚಕರಾದ ನಿವೃತ್ತ ಐ.ಎ.ಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಛಾಯಾಚಿತ್ರ ವಿಭಾಗದ ಅಧಿಕಾರಿ ಚಂದ್ರಶೇಖರ್, ನಿವೃತ್ತ ಹಾಗೂ ಹಿರಿಯ ಛಾಯಾಗ್ರಾಹಕರಾದ ವಿಶ್ವನಾಥ್ ಸುವರ್ಣ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಹಿರಿಯ ಸಹಾಯಕ ನಿರ್ದೇಶಕರಾದ ಜಡಿಯಪ್ಪ ಗೆದ್ಲಗಟ್ಟಿ ಅವರನ್ನು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ನೇಮಿಸಲಾಗಿತ್ತು.

ಕಳೆದ ಎರಡು ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಭಾರತ ಚುನಾವಣಾ ಆಯೋಗ ಪ್ರಶಂಸಿಸುವುದರ ಜೊತೆಗೆ ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ನಮ್ಮ ರಾಜ್ಯದ ಈ ಛಾಯಾಚಿತ್ರಗಳನ್ನು ಬಳಸಿಕೊಂಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ರಾಜ್ಯಮಟ್ಟದ ಈ ಸ್ಪರ್ಧೆಯಲ್ಲಿ ಮಾಧ್ಯಮಗಳಲ್ಲಿ ಕಾರ್ಯ ನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರು ಸೇರಿ ಒಟ್ಟು 219 ಜನರು ಭಾಗವಹಿಸಿದ್ದರು. ಛಾಯಾಗ್ರ್ರಾಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಕಳುಹಿಸಿದ್ದರು. ಪ್ರಶಸ್ತಿಗೆ ಆಯ್ಕೆಯಾದ ಎಲ್ಲರಿಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಬಹುಮಾನಗಳ ವಿವರ:

ಪ್ರಶಸ್ತಿ ವಿಜೇತರಾದ ಮಂಗಳೂರಿನ ಪ್ರಜಾವಾಣಿ/ಡೆಕ್ಕನ್ ಹೆರಾಲ್ಡ್‍ನ ಹೆಚ್ ಫಕ್ರುದ್ಧೀನ್ ಪ್ರಥಮ ಬಹುಮಾನ ರೂ. 25,000/-, ಬಾಗಲಕೋಟೆಯ ಹಳ್ಳಿ ಸಂದೇಶ ಪತ್ರಿಕೆಯ ಇಂದ್ರಕುಮಾರ್ ಬಿ ದಸ್ತೇನವರ ದ್ವಿತೀಯ ಬಹುಮಾನ ರೂ. 15,000/- ಮೂಡಬಿದಿರೆ ಹವ್ಯಾಸಿ ಛಾಯಾಗ್ರಾಹಕ ಜಿನೇಶ್ ಪ್ರಸಾದ್ ತೃತೀಯ ಬಹುಮಾನ ರೂ. 10,000/-, ಉಡುಪಿಯ ಉದಯವಾಣಿ ಪತ್ರಿಕೆಯ ಅಸ್ಟ್ರೋ ಮೋಹನ್ ಹಾಗೂ ಬೆಂಗಳೂರಿನ ಸಂಜೆ ಸಮಯ ಪತ್ರಿಕೆಯ ಶ್ರೀಮತಿ ಪೂರ್ಣಿಮ ರವಿ ಸಮಾಧಾನಕರ ಬಹುಮಾನ ರೂ. 3000/- ಮತ್ತು ಮೈಸೂರಿನ ವಿಜಯವಾಣಿ ಪತ್ರಿಕೆಯ ಕೆ.ಹೆಚ್ ಚಂದ್ರು ಹಾಗೂ ಕಲಬುರಗಿಯ ವಿಜಯ ಕರ್ನಾಟಕ ಪತ್ರಿಕೆಯ ಶಿವಶರಣಪ್ಪ ಬೆನ್ನೂರ್ ರೂ. 2500/- ವಿಶೇಷ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ.

 
 
 
 
 

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here