ವಸ್ತ್ರ ವಿನ್ಯಾಸ ( ಟೈಲರಿಂಗ್) ಉಚಿತ ತರಬೇತಿ

0
37
Share this Article
0
(0)
Views: 1

ಬೆಂಗಳೂರು ನಗರ ಜಿಲ್ಲೆ, ಜೂನ್ 14:

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ವಸ್ತ್ರವಿನ್ಯಾಸ(ಟೈಲರಿಂಗ್) ಕುರಿತ 30 ದಿನಗಳ ಉಚಿತ ತರಬೇತಿಯು ಆಗಸ್ಟ್ 01 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. 

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‍ ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‍ ನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

            ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ.

            ಆಸಕ್ತರು ‍ ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಶಾಖೆ, ರುಡ್‍ ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here