ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್05:
ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ವಿತರಿಸಲು ಕೇಂದ್ರ ಸರ್ಕಾರದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಅಲಿಂಕೋ ಸಂಸ್ಥೆಯ ವತಿಯಿಂದ ಮೌಲ್ಯಮಾಪನ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ.
ಆದರಂತೆ ಅಲಿಂಕೋ ಸಂಸ್ಥೆಯ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೌಲ್ಯಮಾಪನ ಶಿಬಿರಗಳನ್ನು ಆಯೋಜಿಸಲು ಕೆಳಕಂಡ ಸ್ಥಳಗಳಲ್ಲಿ ನಿಗದಿಪಡಿಸಿದ ದಿನಾಂಕಗಳಂದು ತೀರ್ಮಾನಿಸಲಾಗಿರುತ್ತದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಡಿ.ಡಿ.ಆರ್.ಸಿ ಯಲ್ಲಿ ಜೂನ್ 10, ನೆಲಮಂಗಲ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಜೂನ್ 11, ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಜೂನ್ 12, ಹೊಸಕೋಟೆ ತಾಲ್ಲೂಕಿನ ಸ್ತ್ರೀಶಕ್ತಿ ಭವನದಲ್ಲಿ ಜೂನ್13 ರಂದು ಆಯೋಜಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಈ ಯೋಜನೆಗಳ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
ವಿಕಲಚೇತನರು ತರಬೇಕಾದ ದಾಖಲಾತಿಗಳು:
ಯುಡಿಐಡಿ ಕಾರ್ಡ್ 40%, ಆದಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ/ಬಿಪಿಎಲ್ ಕಾರ್ಡ್, ಪಾಸ್ಪೋರ್ಟ್ ಸೈಜ್ ಕಲರ್ ಪೋಟೋ
60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ತರಬೇಕಾದ ದಾಖಲಾತಿಗಳು:
ಆದಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ/ಬಿಪಿಎಲ್ ಕಾರ್ಡ್, ಪಾಸ್ಪೋರ್ಟ್ ಸೈಜ್ ಕಲರ್ ಪೋಟೋ
ಹೆಚ್ಚಿನ ಮಾಹಿತಿಗಾಗಿ ಗ್ರಾಮ/ ಪಟ್ಟಣ/ ತಾಲ್ಲೂಕು ಪಂಚಾಯಿತಿ/ ಪುರಸಭೆ/ನಗರಸಭೆಯ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ: 080- 29787441 ಗೆ ಸಂಪರ್ಕಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.