ಧಾರವಾಡ ಜೂನ್.07:
ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2024-25 ನೇ ಸಾಲಿಗೆ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 16 ಹುದ್ದೆಗಳಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಡಿಇಡಿ, ಬಿಇಡಿ ಪ್ರಮಾಣ ಪತ್ರ, ಆರ್‍ಸಿಐ ಪ್ರಮಾಣ ಪತ್ರ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಜೂನ್ 12, 2024 ರಂದು ಸಂಜೆ 5.00 ಗಂಟೆಯೊಳಗಾಗಿ ಸಲ್ಲಿಸಬೇಕು ಈ ಹುದ್ದೆಗಳಲ್ಲಿ ನೇರಗುತ್ತಿಗೆಯ ಸಮನ್ವಯ ಶಿಕ್ಷಕರು ಮಾರ್ಚ್ 31, 2025 ರ ವರೆಗೂ ಕರ್ತವ್ಯ ನಿರ್ವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0836270554 ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ, ಕಚೇರಿಯನ್ನು ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.