Views: 0
ಶಿವಮೊಗ್ಗ, ಮೇ-29:
ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಸಾಣೇಹಳ್ಳಿ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂಗ ಅರ್ಜಿ ಆಹ್ವಾನಿಸಿದೆ.
ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು, ಪದವೀಧರರಿಗೆ ಆದ್ಯತೆ ನೀಡಲಾಗುವುದು. ರಂಗಭೂಮಿಯಲ್ಲಿ ಅಸಕ್ತಿಯಿದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕು. ಆಯ್ಕೆಯಾದವರಿಗೆ ಊಟ-ವಸತಿ ವ್ಯವಸ್ಥೆಯಿದ್ದು, ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತದೆ. ಗ್ರಂಥ ಭಂಡಾರ ಹಾಗೂ ದೃಶ್ಯ, ಶ್ರವ್ಯ ಪರಿಕತಗಳ ಅನುಕೂಲತೆ ಇದೆ. ರಂಗಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ಮತ್ತುಪಾಶ್ಚಾತ್ಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿದ ತರಗತಿಗಳು ನಡೆಯುತ್ತದೆ.
ಆಸಕ್ತರು ಅರ್ಜಿ ನಮೂನೆಯನ್ನು ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ, ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆ -577515 ವಿಳಾಸಕ್ಕೆ ಪತ್ರ ಬರೆದು ತರಿಸಿಕೊಳ್ಳಬಹುದು ಅಥವಾ ವೆಬ್ಸೈಟ್ www.theatreschoolsanehalli.org ರಲ್ಲಿ ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಜೂನ್ 25ರೊಳಗಾಗಿ ರಂಗಶಾಲೆ ಸಲ್ಲಿಸುವಂತೆ ರಂಗಶಾಲೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9448398144/ 8861043553/ 9482942394/ 9972007015 ಗಳನ್ನು ಸಂಪರ್ಕಿಸುವುದು.