More

    ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಇನ್ನಿಲ್ಲ

    Share this Article
    0
    (0)
    Views: 2

    ಬೆಂಗಳೂರು:
    ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದ ಕಾರಣದಿಂದಾಗಿ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಡಗಿನವರಾದ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು.
    ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ, ಉದಯ ಟಿವಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ರಾಜ್ಯದ ನಾನಾ ಭಾಗದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿ ಮಾಡಿದ್ದರು. ಜನಪರ ಹೋರಾಟದಲ್ಲಿ ಭಾಗವಹಿಸಿದ್ದ ಕಾಮ್ರೆಡ್ ಜಯಕುಮಾರ್ ಅವರು ಇತ್ತೀಚೆಗೆ ಗಾಂಧಿ ಮರೆತ ನಾಡಿನಲ್ಲಿ ಮತ್ತು ಕಾಡು ಹಾದಿಯ ಬೆಳಕಿನ ಜಾಡಿನಲ್ಲಿ ಎಂಬ ಎರಡು ಪುಸ್ತಕಗಳನ್ನು ಹೊರತಂದಿದ್ದರು.

    ಇಂದು ಸಂಜೆ ಅವರ ದೇಹವನ್ನು ಬೆಂಗಳೂರು ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ.

    ಕೆಯುಡಬ್ಲೂಜೆ ಸಂತಾಪ:

    ಹಿರಿಯ ಮತ್ತು ಕ್ರಿಯಾಶೀಲ
    ಪತ್ರಕರ್ತರಾಗಿದ್ದ ಆರ್.ಜಯಕುಮಾರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡ ಮಾಡುವ ಪ್ರಶಸ್ತಿಗೆ ಆರ್.ಜಯಕುಮಾರ್ ಭಾಜನರಾಗಿದ್ದರು. ಅನಾರೋಗ್ಯದ ಕಾರಣದಿಂದ ಚಿತ್ರದುರ್ಗದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗದ ಕಾರಣ, ಮೈಸೂರಿನ ಅವರ ತೋಟದ ಮನೆಗೆ ಹೋಗಿ ಅಲ್ಲಿ ಕೆಯುಡಬ್ಲೂಜೆ ಪ್ರಶಸ್ತಿ ಪ್ರದಾನ ಮಾಡಿತ್ತು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

    ಜಯಕುಮಾರ್ ನಿಧನದಿಂದ ಕ್ರೀಯಾಶೀಲ ಪತ್ರಕರ್ತನನ್ನು ಸುದ್ದಿಮನೆ ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ದುಃಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ಕರುಣಿಸಲಿ ಎಂದು ತಗಡೂರು ಪ್ರಾರ್ಥಿಸಿದ್ದಾರೆ.

     

    How useful was this post?

    Click on a star to rate it!

    Average rating 0 / 5. Vote count: 0

    No votes so far! Be the first to rate this post.

    Latest articles

    spot_imgspot_img

    Related articles

    Leave a reply

    Please enter your comment!
    Please enter your name here

    spot_imgspot_img