ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಹ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಅನೇಕ ಗಣ್ಯರು ಈ ಕಾರ್ಯಕ್ರಮದ ಪಾಲ್ಗೊಳ್ಳಲಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮವು ವಿಧಾನಸೌಧದ ಮುಂಭಾಗದಲ್ಲಿರುವ ಗ್ರಾಂಡ್ ಸ್ಟೆಪ್‌ನ ಮೆಟ್ಟಿಲುಗಳಿಂದ ಆರಂಭವಾಗಲಿದ್ದು, ಕೆ.ಆರ್.ವೃತ್ತ, ನೃಪತುಂಗ ರಸ್ತೆ, ಕಸ್ತೂರಬಾ ರಸ್ತೆ, ಸಿದ್ದಲಿಂಗಯ್ಯ ವೃತ್ತ, ಕ್ವೀನ್ಸ್ ಪ್ರತಿಮೆ ವೃತ್ತ, ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ವೃತ್ತದ ಮೂಲಕ ವಿಧಾನಸೌಧ ತಲುಪಲಿದೆ. 10ಕೆ ಓಟದ ಮಾರ್ಗವು ಎರಡು ಬಾರಿ ಪುನರಾವರ್ತನೆಯಾಗಲಿದೆ.