ಬೆಂಗಳೂರು ನಗರ ಜಿಲ್ಲೆ, ಜುಲೈ 29:
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಬೈಕ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 21 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.