ರೈತರು ಬೆಳೆದ ತೋಟಗಾರಿಕೆ ಉತ್ಪನ್ನಗಳಿಗೆ ಸೂಕ್ತ ರೀತಿಯ ಮಾರಾಟದ ವ್ಯವಸ್ಥೆ ಕಲ್ಪಿಸಿ ಉತ್ತಮ ಬೆಲೆ ದೊರಕಿಸಿಕೊಡಲು ಅಗತ್ಯವಾದ ವಿವಿಧ ಮಾದರಿಯ ಮಾರಕಟ್ಟೆಗಳ ನಿರ್ಮಾಣಕ್ಕಾಗಿ ಈ ಕೆಳಕಂಡಂತೆ ಸಹಾಯಧನ ನೀಡಲಾಗುತ್ತದೆ.
ಟರ್ಮಿನಲ್ ಮಾರುಕಟ್ಟೆ ನಿರ್ಮಾಣಕ್ಕಾಗಿ PPP (Public Private Partnership) ಅಡಿ ಶೇ. 25 ರಂತೆ ಗರಿಷ್ಠ ರೂ.50 ಕೋಟಿ ಸಹಾಯಧನವನ್ನು ನೀಡಲಾಗುತ್ತದೆ. ಸÀಗಟು ಮಾರುಕಟ್ಟೆ ನಿರ್ಮಾಣಕ್ಕಾಗಿ ಶೇ.25 ರಂತೆ ಗರಿಷ್ಠ ರೂ.25 ಕೋಟಿ ಸಹಾಯಧನವನ್ನು ನೀಡಲಾಗುತ್ತದೆ. ಗ್ರಾಮೀಣ ಮಾರುಕಟ್ಟೆ ನಿರ್ಮಾಣಕ್ಕಾಗಿ ಶೇ.40 ರಂತೆ ಗರಿಷ್ಠ ರೂ.10 ಲಕ್ಷಗಳ ಸಹಾಯಧನವನ್ನು ನೀಡಲಾಗುತ್ತದೆ. ಚಿಲ್ಲರೆ ಮಾರುಕಟ್ಟೆ ನಿರ್ಮಾಣಕ್ಕಾಗಿ ಶೇ.35 ರಂತೆ ಗರಿಷ್ಠ ರೂ.5.25 ಲಕ್ಷಗಳ ಸಹಾಯಧನವನ್ನು ನೀಡಲಾಗುತ್ತದೆ. ತೋಟಗಾರಿಕೆ ಉತ್ಪನ್ನಗಳನ್ನು ಮಾರಾಟ ಮಾಡಲು ಉಪಯುಕ್ತವಾದ ಸ್ಥಿರ ಅಥವಾ ಚರ ತಳ್ಳು ಮಾರಾಟ ಗಾಡಿಗಳ ಖರೀದಿಗೆ ಶೇ.50 ರಂತೆ ಗರಿಷ್ಠ ರೂ.0.15 ಲಕ್ಷಗಳವರೆಗೆ ಸಹಾಯಧನವನ್ನು ನೀಡಲಾಗುತ್ತದೆ.