Views: 0
ಧಾರವಾಡ ಮೇ.29:
ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ 2025 ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕøತಿ ಹಾಗೂ ನೂತನ ಆವಿಷ್ಕಾರಗಳಲ್ಲಿ ಉತ್ತಮ ಸಾಧನೆ ಮಾಡಿದಂತಹ 5 ವರ್ಷ ಮೇಲ್ಪಟ್ಟ 18 ವರ್ಷದೊಳಗಿನವರು ಜುಲೈ 31, 2024 ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖೆ: 0836-2233840 ಅಥವಾ ನ್ಯಾಷನಲ್ ಅವಾರ್ಡ ಪೊರ್ಟಲ್ ಆನ್ ಲೈನ್ ವೆಬ್ಸೈಟ್ https://awards.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷಕರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.