ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 08
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು, ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಅರ್ಥಿಕ ನೆರವು (ಹೊಸತು, ನವೀಕರಣ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ ( ವಾಣಿಜ್ಯ ಬ್ಯಾಂಕ್ ಗಳ ಸಹಯೋಗದೊಂದಿಗೆ) ಹಾಗೂ ಸ್ವಾವಲಂಭಿ ಸಾರಥಿ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ನಿಜಶರಣ ಅಂಬಿಗರ ಚೌಡಯ್ಯ ಸಮುದಾಯದ ಜಾತಿ ಹಾಗೂ ಉಪಜಾತಿಗಳಿಗೆ ಸೇರಿದ ಅಭ್ಯರ್ಥಿಗಳಿಂದ ಆನ್ ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಗಸ್ಟ್ 31ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ , ಬೆಂಗಳೂರು-32 ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಕಛೇರಿ ಅಥವಾ ನಿಗಮದ ವೈಬ್ ಸೈಟ್ :http://ambigaradeveloment.karnataka.gov.in ಅಥವಾ ನಿಗಮದ ಸೂರವಾಣಿ ಸಂಖ್ಯೆ :080-23539601 ಅಥವಾ ಜಿಲ್ಲಾ ವ್ಯವಸ‍್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.