ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 11
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರರಾಷ್ಟ್ರೀಯ/ ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಮಾರ್ಗಸೂಚಿಗಳು ಹೊರಡಿಸಲಾಗಿದೆ.
1. ಕ್ರೀಡಾಪಟುಗಳು ಪರಿಶಿಷ್ಟ ಜಾತಿ ಜಾತಿಗೆ ಸೇರಿದವರಾಗಿರಬೇಕು. ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು (ಆರ್.ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರ).
2. ಅರ್ಜಿದಾರರು ನಿರುದ್ಯೋಗಿಗಳಾಗಿದ್ದು, ಸ್ವಯಂ ಉದ್ಯೋಗ ಹೊಂದಲು ಘಟಕ ವೆಚ್ಚದಲ್ಲಿ ಶೇಕಡಾ 75ರಷ್ಟು ರೂ. 15.00 ಲಕ್ಷಗಳನ್ನು ಇಲಾಖೆ ವತಿಯಿಂದ ಭರಿಸಲಾಗುವುದು ಹಾಗೂ ಶೇಕಡಾ 25ರಷ್ಟು ವೆಚ್ಚವನ್ನು ಸ್ವಯಂ ಭರಿಸುವ ಷರತ್ತಿಗೆ ಬದ್ಧರಾಗಿರಬೇಕು.
3. ಕ್ರೀಡಾಪಟುಗಳು ಅಂತರರಾಷ್ಟ್ರೀಯ / ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾಗಿರಬೇಕು.
4. ಜಿಮ್ ಸಲಕರಣೆಗಳನ್ನು ಕರ್ನಾಟಕದ ಕ್ರೀಡಾಪಟುಗಳಿಗೆ ಮಾತ್ರ ನೀಡಲಾಗುವುದು.
5. ಕ್ರೀಡಾಪಟುಗಳು ಕರ್ನಾಟಕದ ಮೂಲದವರಾಗಿದ್ದು, ಬೇರೆ ರಾಜ್ಯ ಅಥವಾ ಕ್ರೀಡಾ ತಂಡವನ್ನು ಪ್ರತಿನಿಧಿಸುವ ಕ್ರೀಡಾಪಟುಗಳು ಈ ಪುರಸ್ಕಾರಕ್ಕೆ ಅರ್ಹರಾಗಿರುವುದಿಲ್ಲ.
6. ಕ್ರೀಡಾಪಟುಗಳು ಸ್ವಯಂ ದೃಢೀಕೃತ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಂಬಂಧಪಟ್ಟ ಜಿಲ್ಲೆಯ ಉಪ / ಸಹಾಯಕ ನಿರ್ದೇಶಕರ ಮೂಲಕ ಸಲ್ಲಿಸತಕ್ಕದ್ದು.
7. ಕ್ರೀಡಾಪಟುವಿನ ಹೆಸರು ಹಾಗೂ ಭಾವಚಿತ್ರವುಳ್ಳ ಪಡಿತರ ಚೀಟಿ, ಮತದಾರರ ಚೀಟಿ ಅಥವಾ ಸರ್ಕಾರದಿಂದ ವಿತರಿಸಿರುವ ಗುರುತಿನ ಚೀಟಿಯ ನಕಲನ್ನು ಲಗತ್ತಿಸುವುದು
8. ಅಂತರರಾಷ್ಟ್ರೀಯ ಸಂಸ್ಥೆ ಮತ್ತು ಇತರೆ ಮಾನ್ಯತೆ ಪಡೆದ ಕ್ರೀಡಾ ಸಂಸ್ಥೆಗಳು ನಡೆಸುವ ಅಧಿಕೃತ ಚಾಂಪಿಯನ್ ಶಿಪ್ ಗಳಲ್ಲಿ, ಪದಕ ವಿಜೇತರಾದವರನ್ನು ಪರಿಗಣಿಸಲಾಗುವುದು (ಮಾನ್ಯತೆ ಪಡೆಯದೇ ಇರುವ ಫೆಡರೇಷನ್ ನಡೆಸುವ ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಅರ್ಹರಿರುವುದಿಲ್ಲ)
9. ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಜಿಮ್ ಸ್ಥಾಪನೆಗೆ ಅರ್ಹರಿರುವುದಿಲ್ಲ.
10. ಬ್ಯಾಂಕ್ ಖಾತೆ ಕಡ್ಡಾಯವಾಗಿ ಕ್ರೀಡಾಪಟುವಿನ ಹೆಸರಿನಲ್ಲಿರಬೇಕು. ಬ್ಯಾಂಕ್ ಪಾಸ್ ಪುಸ್ತಕದ ಮುಖಪುಟದ ಜೆರಾಕ್ಸ್ ಪ್ರತಿ ಲಗತ್ತಿಸಬೇಕು. (ಹೆಸರು, ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ ಕೋಡ್ ಇರುವ ಪುಟ).
11. ಜಿಮ್ ಸ್ಥಾಪಿಸಲು ಅರ್ಜಿಯನ್ನು ಸಲ್ಲಿಸಲು ಕ್ರೀಡಾಪಟುಗಳು ಜಿಮ್ ಸ್ಥಾಪಿಸಲು ಸೂಕ್ತವಾದ ಸ್ಥಳವಕಾಶ ಹಾಗೂ ಕಟ್ಟಡದ ಸಂಪೂರ್ಣ ದಾಖಲೆಗಳನ್ನು ಸಲ್ಲಿಸುವುದು. ಸಂಪೂರ್ಣ ದಾಖಲೆಗಳು ಇಲ್ಲದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುದಿಲ್ಲ.
12. ಜಿಮ್ ಸಲಕರಣಿಗಳನ್ನು, ಉತ್ತಮ ರೀತಿಯಲ್ಲಿ ನಿರ್ವಹಿಸಲು ಅಗತ್ಯ ಮಾನವ ಸಂಪನ್ಮೂಲ ಹೊಂದಿರತಕ್ಕದ್ದು.
13. ಜಿಮ್ ಶಾಲೆ ಸಲಕರಣೆಗಳನ್ನು ಬೇರೆ ಯಾರಿಗೂ ಮಾರುವುದಾಗಲೀ, ಪರಭಾರ ಮಾಡುವುದಾಗಲೀ ಮಾಡತಕ್ಕದ್ದಲ್ಲ.
14. ಅರ್ಜಿದಾರರು ಸ್ಥಳೀಯವಾಗಿ ಯಾವುದೇ ಅಪರಾದ ಹಿನ್ನೆಲೆ ಉಳ್ಳವರಾಗಿರದ ಬಗ್ಗೆ ಸ್ವಯಂ ದೃಡೀಕರಿಸಿ ಸಲ್ಲಿಸುವುದು.
15. ಕ್ರೀಡಾಪಟುಗಳ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕಕ್ಕೆ 40 ವರ್ಷ ವಯಸ್ಸನ್ನು ಮೀರಿರಬಾರದು.
16. ಇಲಾಖೆಯ ಅಧಿಕಾರಿಗಳು ಪರಿಶೀಲನೆಗೆ ಬಂದ ಸಂದರ್ಭದಲ್ಲಿ ಸಂಪೂರ್ಣ ವರದಿಯನ್ನು ನೀಡಿ ಸಹಕರಿಸತಕ್ಕದ್ದು.
2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರರಾಷ್ಟ್ರೀಯ / ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಅರ್ಜಿಗಳನ್ನು ಸೆಪ್ಟೆಂಬರ್ 25ರೊಳಗಾಗಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮುಖಾಂತರ ಸಲ್ಲಿಸುವಂತೆ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಛೇರಿಯ ಸಹಾಯಕರು / ಕಛೇರಿ ದೂರವಾಣಿ ಸಂಖ್ಯೆ 9632778567 ಮತ್ತು 080-29787443 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.