ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ದಿನಾಂಕ: 13-06-2024 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಲ್ಮಾ ಕೆ.ಫಾಹಿಮ್ ರವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಂತರ ದೊಡ್ಡಬಳ್ಳಾಪುರ ತಾಲ್ಲೂಕಿನ APMC ದಾಸ್ತಾನು ಮಳಿಗೆ ಭೇಟಿ ನೀಡಿ ಅಕ್ಕಿ ಮತ್ತು ರಾಗಿ ಸಂಗ್ರಹಣೆಯ ವ್ಯವಸ್ಥೆ ಪರಿಶೀಲಿಸಿದರು.
ನಂತರ ತೂಬಗೆರೆ ಗ್ರಾಮ ಪಂಚಾಯಿತಿಯ ಕಾವನಹಳ್ಳಿ ಗ್ರಾಮದ ಶ್ರೀ ಕಾಂತ ಫಾರಂ ವೇನ್ಸಾಯಿ ಪ್ಲೋರಿಟೆಕ್ ಪಾಲಿಮನೆಯಲ್ಲಿ ಪುಷ್ಪ ಬೆಳೆಗಳು Rose, Gerbera, Gypsophila, Hydrangia, Limonium snapdragon, flowers
ವೀಕ್ಷಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ರವರು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ತೋಟಗಾರಿಕೆ ಬೆಳೆ ಹೆಚ್ಚು ಅಭಿವೃದ್ಧಿ ಪಡಿಸಿರುವ ಬಗ್ಗೆ ಸಮಾಲೋಚಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು, ಜಿಲ್ಲಾ ಪಂಚಾಯತ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತಿದರು.