ಬಳ್ಳಾರಿ,ಜೂ.13:
ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಶಿಕ್ಷಣದಲ್ಲಿ ಗುಣಾತ್ಮಕ ಪ್ರಗತಿಯನ್ನು ಸಾಧಿಸಲು 2024-2025 ನೇ ಸಾಲಿನಿಂದ ಪ್ರಾಥಮಿಕ ಹಂತದಲ್ಲಿ ಅರ್ಹ ಸರ್ಕಾರಿ ಶಾಲೆಗಳಲ್ಲಿ “ಪೂರ್ವ ಪ್ರಾಥಮಿಕ’’ ಭಾಗವಾಗಿ ಎಲ್‍ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ (ಆಡಳಿತ) ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ತಿಳಿಸಿದ್ದಾರೆ.
ಮಕ್ಕಳಿಗೆ ಆರಂಭಿಕ ಹಂತದಲ್ಲಿ ಭದ್ರ ಬುನಾದಿ ಹಾಕಲು ಮತ್ತು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಆರಂಭಿಕ ಶಿಕ್ಷಣದ ಸೌಲಭ್ಯವನ್ನು ಕಲ್ಪಿಸಿಕೊಡುವುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕಾಗಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯು ಉತ್ತಮ ಹೆಜ್ಜೆಯನ್ನಿಟ್ಟು ‘ಅಕ್ಷರ ಆವಿಷ್ಕಾರ’ ಯೋಜನೆಗೆ ಕೈಜೋಡಿಸಿದೆ.
ಜಿಲ್ಲೆಯಲ್ಲಿ ಒಟ್ಟು 119 ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.