ಬೆಂಗಳೂರು, ಜೂನ್ 27
ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ನಿರ್ದೇಶಕರ ಕಾರ್ಯಾಲಯ ಸರ್ಕಾರಿ ಕೇಂದ್ರ ಮುದ್ರಣಾಲಯ, ಮೈಸೂರು ರಸ್ತೆ, ಬೆಂಗಳೂರು-560 059 ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಿ.ಎಸ್. ರಘುನಾಥ್, ಬೈಂಡರ್, ಇವರು ಆರು ವರ್ಷಗಳಿಂದ ಸರ್ಕಾರಿ ಕಛೇರಿಯ ಕರ್ತವ್ಯಕ್ಕೆ ಪೂರ್ವಾನುಮತಿ ಪಡೆಯದೆ ಅನಧಿಕೃತವಾಗಿ ಗೈರು ಹಾಜರಾಗಿರುವ ಬಗ್ಗೆ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ & ಮೇಲ್ಮನವಿ) ನಿಯಮಗಳು 1957ರ ನಿಯಮ 11 ರ ಪ್ರಕಾರ ಇಲಾಖಾ ವಿಚಾರಣೆಯನ್ನು ನಡೆಸಿ ಕಚೇರಿ ಆದೇಶ ಸಂಖ್ಯೆ : ಡಿಪಿಎಸ್/ 33 / ಸಿಸಿಎ / (2017-18)2024-25/72 ದಿನಾಂಕ: 23-05-2024 ರಂತೆ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸುವ (Dismissal from Service) ದಂಡನೆಯನ್ನು ವಿಧಿಸಿ ಆದೇಶಿಸಲಾಗಿದೆ ಎಂಬ ಅಂಶವನ್ನು ಸಾರ್ವಜನಿಕವಾಗಿ ಎಲ್ಲರ ಗಮನಕ್ಕೆ ತರಲಾಗಿದೆ ಎಂದು ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರಿದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.