ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಾಲ-ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

0
60
Share this Article
0
(0)
Views: 5

 

 ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 15:-

2024-25ನೇ ಸಾಲಿಗೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಆನ್ಲೈನ್ ವಿಳಾಸ kacdc.karnataka.gov.inರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.

      ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ “ನಮೂನೆ-ಜಿ” ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33%, ವಿಶೇಷಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗಳಿಗೆ ಶೇ.5% ಮೀಸಲಾತಿ ಇರಿಸಿದೆ, ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.

ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯ ಅರ್ಹತೆಗಳು:-

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.3,00,000/-ಗಳ ಮಿತಿಯೊಳಗಿರಬೇಕು, ಅರ್ಜಿದಾರರು 18 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು, ಈ ಯೋಜನೆಯಲ್ಲಿ ರೂ.1,00,000/-ಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.20 ರಷ್ಟು ಸಹಾಯಧನ ಹಾಗೂ ಶೇ.80ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು, 2 ತಿಂಗಳ ವಿರಾಮ ಅವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು, 2019-20 ಮತ್ತು 2020-21ನೇ ಸಾಲಿನ ಫಲಾನುಭವಿಗಳು ಪಡೆದ ಸಾಲವನ್ನು ಅವಧಿಯೊಳಗೆ ಸಂಪೂರ್ಣವಾಗಿ ಮರುಪಾವತಿಸಿದ್ದಲ್ಲಿ, ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಬ್ಯಾಂಕ್ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆಯ ಅರ್ಹತೆಗಳು:-

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು, ಅರ್ಜಿದಾರರು 21 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು, ಅಭ್ಯರ್ಥಿಯು Yellow board (ಎಲೆಕ್ಟ್ರಿಕ್ / ಸಿ.ಎನ್.ಜಿ) ತ್ರಿಚಕ್ರ ವಾಹನ ಅಥವಾ ನಾಲ್ಕು ಚಕ್ರದ ವಾಹನವನ್ನು ಖರೀದಿಸಲು ನಿಗಮದಿಂದ ರೂ.1.00ಲಕ್ಷದವರೆಗೆ ಸಬ್ಸಿಡಿ ನೀಡಲಾಗುವುದು. ಬಾಕಿ ಮೊತ್ತವನ್ನು ಯಾವುದಾದರು ಬ್ಯಾಂಕ್ಗಳಿಂದ ಸಾಲ ಪಡೆಯಬೇಕಾಗಿರುತ್ತದೆ, ವಾಹನವನ್ನು ಆಹಾರ ವಾಹಿನಿಯನ್ನಾಗಿ ಪರಿವರ್ತಿಸಿದ್ದಲ್ಲಿ ಮಾತ್ರ ಎರಡನೇ ಕಂತಿನ ಮೊತ್ತ ರೂ.1.00ಲಕ್ಷಗಳ ಸಬ್ಸಿಡಿಯನ್ನು ನೇರವಾಗಿ ಫಲಾನುಭವಿಗೆ ಡಿ.ಬಿ.ಟಿ ಮೂಲಕ ಬಿಡುಗಡೆ ಮಾಡಲಾಗುವುದು. Only after doing fabrication of vehicle in kitchen grade steel 2nd instalment of 1.00lakh subsidy will be released through DBT.

ವಾಸವಿ ಜಲಶಕ್ತಿ ಯೋಜನೆಯ ಅರ್ಹತೆಗಳು:-

ಈ ಯೋಜನೆಯಡಿ 2 ರಿಂದ 15 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ-ಸಹಾಯಧನವನ್ನು ನೀಡಲಾಗುವುದು, ಅರ್ಜಿದಾರರಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು, ಅರ್ಜಿದಾರರು 21 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು, ಈ ಯೋಜನೆಯಡಿ ಗರಿಷ್ಠ ರೂ.2,00,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದೀಕರಣಕ್ಕಾಗಿ ರೂ.50,000/-ಗಳ ಸಹಾಯಧನ ನೀಡಲಾಗುವುದು, 6 ತಿಂಗಳ ವಿರಾಮಾವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು,

ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು:-

ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. (ಈ ಯೋಜನೆಗೆ ಸಂಬಂಧಪಟ್ಟಂತೆ ಸಿ.ಇ.ಟಿ ಮತ್ತು ನೀಟ್ Counseling ಮುಗಿದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದು)

   ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ: 080-27275114 (ಬೆಳಿಗ್ಗೆ:10.00 ರಿಂದ ಸಂಜೆ:5.30 ವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಿಳಾಸಗಳನ್ನು ಹಾಗೂ ಎಲ್ಲಾ ವಿವರಗಳನ್ನುkacdc.karnataka.gov.in ಇಲ್ಲಿ ತಿಳಿಯಬಹುದಾಗಿದೆ ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕ ರಂಗನಾಥ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here