ಶಿವಮೊಗ್ಗ, ಆ.17
ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸಹಾಯಧನ-ಸಾಲ ಸೌಲಭ್ಯ ನೀಡಲು ಆನ್‌ಲೈನ್ ಪೋರ್ಟಲ್ ಸೇವಾಸಿಂಧು ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.16 ಕಡೆಯ ದಿನವಾಗಿದೆ. ಆದರೆ ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿದ್ದು, 18 ರಿಂದ 55 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.
ರಾಜ್ಯ ಸರ್ಕಾರ/ನಿಗಮದ ಯೋಜನೆಗಳು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ(ಬ್ಯಾಂಕ್‌ಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ(ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ(ನವೀಕರಣ), ವಿದೇಶಿ ವ್ಯಾಸಂಗ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದು.
ಅರಿವು ಯೋಜನೆಗೆ ಅಭ್ಯರ್ಥಿ ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ವಾರ್ಷಿಕ ವರಮಾನ ರೂ.3.50 ಲಕ್ಷಗಳಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ವಯೋಮಿತಿ 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98000/- ಮತ್ತು ನಗರ ಪ್ರದೇಶದವರಿಗೆ ರೂ.1,20,000/- ಗಳ ಮಿತಿಯೊಳಗಿರಬೇಕು.
ವಿದೇಶಿ ವ್ಯಾಸಂಗ ಯೊಜನೆ ಸೌಲಭ್ಯ ಪಡೆಯಲು ವಾರ್ಷಿಕ ವರಮಾನ ರೂ.8 ಲಕ್ಷಗಳ ಮಿತಿಯಲ್ಲಿ ಇರಬೇಕು. ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‌ಸೈಟ್ http://upparadevelopment.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ: 080-222522555 ಯಿಂದ ಪಡೆಯಬಹುದು. ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಭಿವೃದ್ದಿ ನಿಗಮ(ನಿ), ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ: 08182-229634 ನ್ನು ಸಂಪರ್ಕಿಸಬಹುದೆoದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.