ಬೆಂಗಳೂರು, ಆಗಸ್ಟ್ 29
ನೋಂದಣಿ ಮತ್ತು ಮುದ್ರಣ ಇಲಾಖೆಯ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 2024 ನೇ ಸೆಪ್ಟೆಂಬರ್:02 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.
ಸಾರ್ವಜನಿಕರು ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ನೋಂದಣಿ ಮಾಡಬಹುದಾಗಿದೆ. ಈ ನೂತನ ವ್ಯವಸ್ಥೆಯನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.