Views: 335
ಬೆಂಗಳೂರು, ಸೆಪ್ಟೆಂಬರ್ 21
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಅರ್ಹ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 2023-24ನೇ ಸಾಲಿನಲ್ಲಿ ಶೈಕ್ಷಣಿಕ ಧನಸಹಾಯ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‍ಎಸ್‍ಪಿ) ಮೂಲಕ ಮಾರ್ಚ್ 14 ರವರೆಗೆ ಅರ್ಜಿಗಳನ್ನು ಸಲ್ಲಿಸಲು ನಿಗಧಿಪಡಿಸಲಾಗಿದ್ದ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.