ಬೆಂಗಳೂರು, ಜುಲೈ 06
ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾಗಿ ಗೌರವಾನ್ವಿತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.
ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ಉಪ ಲೋಕಾಯುಕ್ತರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು, ಶಾಸಕರು, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.