ಬೆಂಗಳೂರು ನಗರ ಜಿಲ್ಲೆ, ಜೂನ್ 10:
ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ ರವರು ಜೂನ್ 11 ರಿಂದ ಜೂನ್ 15 ವರೆಗೆ ಬೆಂಗಳೂರು ನಗರ ಜಿಲ್ಲೆಯ ವಿವಿಧ ತಾಲ್ಲೂಕುಗಳ ನ್ಯಾಯಬೆಲೆ ಅಂಗಡಿ, ಆಹಾರ ಧಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ. ಎಂ.ಎಸ್.ಪಿ.ಟಿ.ಸಿ, ಮಧ್ಯಾಹ್ನ ಉಪಹಾರ ಯೋಜನೆ, ಜಿಲ್ಲಾ ಆಸ್ಪತ್ರೆಯಲ್ಲಿರುವ ಎಸ್.ಆರ್.ಸಿ ಘಟಕ, ಕೃಷಿ ಇಲಾಖೆ, ವಿಕಲ ಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ಇಲಾಖೆ ಮತ್ತು ಸರ್ಕಾರಿ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಪರಿಶೀಲನೆಯ ನಂತರ ವಿವಿಧ ಇಲಾಖೆಯೊಂದಿಗೆ ಸಭೆಯನ್ನು ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ,.