ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ: 2024 ರ ಮುಂಗಾರು ಬೆಳೆ ವಿಮೆಗೆ ನೋಂದಾಯಿಸಿ

0
71
Share this Article
0
(0)
Views: 3

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 04:-

2024ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ. 

  ವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ/ನಾಟಿ ವಿಫಲಗೊಂಡಲ್ಲಿ ವಿಮಾ ರಕ್ಷಣೆ ಒದಗಿಸುವುದು. ಹಾಲಿ ಇರುವ ಬೆಳೆಗಳಿಗೆ (ಬಿತ್ತನೆಯಿಂದ ಕಟಾವಿನ ಹಂತದವರೆಗೆ) ಬರ/ಶುಷ್ಕ ಪರಿಸ್ಥಿತಿ, ನೆರೆ/ಪ್ರವಾಹಗಳಿಂದ ಬೆಳೆ ಮುಳಗಡೆ, ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ, ಭೂಕುಸಿತ, ಬಿರುಗಾಳಿ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವುದು ಹಾಗೂ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (14 ದಿನಗಳವರೆಗೆ) ಆಲಿಕಲ್ಲು ಮಳೆ, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ ನಷ್ಟ ಪರಿಹಾರವನ್ನು ಒದಗಿಸುವುದು ಯೋಜನೆಯ ಪ್ರಮುಖ ಅಂಶಗಳಾಗಿರುತ್ತವೆ.  

  ಆಯಾ ತಾಲ್ಲೂಕಿನಲ್ಲಿ ಮುಖ್ಯ ಬೆಳೆಗಳಿಗೆ ಗ್ರಾಮ ಪಂಚಾಯತ್/ ನಗರ ಸ್ಥಳೀಯ ಸಂಸ್ಥೆಗಳನ್ನು ವಿಮಾ ಘಟಕವಾಗಿ ಹಾಗೂ ಇತರೆ ಬೆಳೆಗಳಿಗೆ ಹೋಬಳಿಯನ್ನು ವಿಮಾ ಘಟಕವಾಗಿ ಪರಿಗಣಿಸಲಾಗಿದೆ.

  ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮುಖ್ಯ ಬೆಳೆಯಾಗಿ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ) ಹಾಗೂ ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ ಮತ್ತು ನೀರಾವರಿ), ತೊಗರಿ (ಮಳೆಯಾಶ್ರಿತ ಹಾಗೂ ನೀರಾವರಿ), ನೆಲಗಡಲೆ (ಮಳೆಯಾಶ್ರಿತ) ಹುರುಳಿ (ಮಳೆಯಾಶ್ರಿತ) ಮತ್ತು ಟೊಮ್ಯಾಟೋ ಬೆಳೆಗಳನ್ನು ಇತೆರೆ ಬೆಳೆಗಳಾಗಿ ಅಧಿಸೂಚಿಸಲಾಗಿದೆ. 

  ಟೊಮ್ಯಾಟೋ ಮತ್ತು ತೊಗರಿ ಬೆಳೆಗೆ ಜುಲೈ 15, ನೆಲಗಡಲೆ ಬೆಳೆಗೆ ಜುಲೈ 31 ಮತ್ತು ಉಳಿದಂತೆ ರಾಗಿ, ಭತ್ತ, ಮುಸುಕಿನ ಜೋಳ ಮತ್ತು ಹುರುಳಿ ಬೆಳೆಗಳಿಗೆ ಆಗಸ್ಟ್ 16 ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಾಗಿದೆ.

  ಅಂತಿಮ ದಿನದವರೆಗೆ ಕಾಯದೆ ರೈತರು ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ಬ್ಯಾಂಕ್ಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸುವುದು.

ಆಸಕ್ತ ರೈತರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಯನ್ನು ಸಂಪರ್ಕಿಸಬಹುದಾಗಿದೆ.      

    ಆಯ್ಕೆಯಾಗಿರುವ ವಿಮಾ ಸಂಸ್ಥೆ-ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿ., ಟೋಲ್ ಫ್ರೀ ನಂ-1800 425 0505 ಹಾಗೂ ಕೃಷಿರಕ್ಷಕ ಸಹಾಯವಾಣಿ 14447 ಈ ಸಂಖ್ಯೆಗೆ ಸಂಪರ್ಕಿಸಬಹುದು. ವಿಮಾ ಸಂಸ್ಥೆಯ ಜಿಲ್ಲಾ ಮಟ್ಟದ ಸಂಯೋಜಕರು ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಉಸ್ತುವಾರಿ ಅಮೋಘ ಆನಂದ ದೂ.-8904088274, ತಾಂತ್ರಿಕ ಸಂಯೋಜಕರು ಪ್ರೀತುಶ್ರೀ ದೂ-8861651892 ಹಾಗೂ ಗುರುಕಿರಣ ದೂ-6362667097 ಕ್ರಮವಾಗಿ ನೆಲಮಂಗಲ,ಹೊಸಕೋಟೆ ಮತ್ತು ದೇವನಹಳ್ಳಿ ತಾಲ್ಲೂಕಿನ ತಾಂತ್ರಿಕ ಸಂಯೋಜಕರು ಇವರನ್ನು ಸಂಪರ್ಕಿಸಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಕೊನೆಯ ದಿನಾಂಕದವರೆಗೆ ವಿಳಂಬಿಸದೆ ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here