Views: 1
ಬೆಂಗಳೂರು, ಡಿಸೆಂಬರ್ 06:
ಕರ್ನಾಟಕ ಲಲಿತಕಲಾ ಅಕಾಡೆಮಿಯ 60 ವರ್ಷದ ಇತಿಹಾಸದಲ್ಲಿ ಪ್ರಪಥಮವಾಗಿ ಕಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿದೆ. ನಿಮಗೆ ನಿಮ್ಮ ಪ್ರತಿಭೆಯನ್ನು ತೋರಿಸಿಕೊಳ್ಳಲು ಮುಕ್ತ ಅವಕಾಶವನ್ನು ಕಲ್ಪಿಸಿದೆ. ಕರ್ನಾಟಕದ ಕಲಾಶಾಲೆಗಳಲ್ಲಿ ಯಾವುದೇ ಹಂತದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸುಂದರ ಪ್ರಕೃತಿಯ ಮಡಿಲಲ್ಲಿ ಕಲಾಶಿಬಿರವನ್ನು ಏರ್ಪಡಿಸಲಾಗುವುದು. ಶಿಬಿರದಲ್ಲಿ ಅತ್ಯುತ್ತಮ ಚಿತ್ರರಚಿಸಿದ ವಿದ್ಯಾರ್ಥಿಗಳಿಗೆ (ಕನಿಷ್ಠ 6, ಗರಿಷ್ಠ 10 ವಿದ್ಯಾರ್ಥಿಗಳಿಗೆ ರೂ.15,000/- ನಗದಿನೊಂದಿಗೆ ಸ್ಮರಣಿಕೆ, ಪ್ರಮಾಣಪತ್ರವನ್ನು ಬಹುಮಾನವನ್ನು ನೀಡಲಾಗುವುದು. ಜೊತೆಗೆ 2025 ರ ಉತ್ತಮ ಕಲಾ ವಿದ್ಯಾರ್ಥಿಯೆಂಬ ಗೌರವವನ್ನು ನೀಡಲಾಗುವುದು.
ನಿಮ್ಮ ಕ್ರಿಯಾಶೀಲತೆಯನ್ನು ಮತ್ತಷ್ಟು ವಿಸ್ತರಿಸುವ ಈ ಸ್ಪರ್ಧೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ನಿಮ್ಮ ತಯಾರಿಗೆ ಒಂದು ತಿಂಗಳ ಕಾಲಾವಕಾಶವನ್ನು ಕಲ್ಪಿಸಿದೆ ಎಂದು ಕರ್ನಾಟಕ ಲಲಿತಾಕಲಾ ಅಕಾಡೆಮಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.