ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

0
49
Share this Article
0
(0)
Views: 1

ಬೆಂಗಳೂರು ನಗರ ಜಿಲ್ಲೆ, ಜೂನ್ 27:

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ತರಬೇತಿ ನೀಡಲು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ (ತಂದೆ/ ತಾಯಿ ಸೇರಿ) ರೂ. 2.50 ಲಕ್ಷ ಮೀರಿರಬಾರದು. ತರಬೇತಿ ಅವಧಿ 2 ವರ್ಷಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ / ಹಿರಿಯ ವಕೀಲರವರಲ್ಲಿ ತರಬೇತಿಗೆ ನೀಯೋಜಿಸಲಾಗುವುದು. ಬೆಂಗಳೂರು ನಗರ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಬಹುದು.

ಆಸಕ್ತ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ವೆಬ್ ಸೈಟ್ www.sw.kar.nic.in ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳು ವೆಬ್ ಸೈಟ್ www.twd.karnataka.gov.in ನಲ್ಲಿ ಅರ್ಜಿಗಳನ್ನು ಜುಲೈ 31ರೊಳಗೆ ಸಲ್ಲಿಸಬಹುದು.

ಆನ್ ಲೈನ ಮೂಲಕ ಸಲ್ಲಿಸಿದ ಅರ್ಜಿಗಳ ಜೊತೆಗೆ ದಾಖಲಾತಿಗಳನ್ನು ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1,1ನೇ ಮಹಡಿ, ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-560027 ಇಲ್ಲಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22240449 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here