ಕೃಷ್ಣರಾಜ ಸಾಗರ ಸುಭದ್ರವಾಗಿದೆ. ಯಾವುದೇ ಆತಂಕ ಬೇಡ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಕಾವೇರಿ ಸಭಾಂಗಣದಲ್ಲಿ ಕೆ.ಡಿ.ಪಿ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ 948 ಕೆರೆಗಳಿದ್ದು, ಕೆರೆ ತುಂಬಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಬಾರಿ ಉತ್ತಮ ಮಳೆ ಯಾಗಿದ್ದು, ಬೆಳೆಗಳಿಗೆ ನೀರಿನ ತೊಂದರೆ ಇಲ್ಲ. ತಾಂತ್ರಿಕಾ ತೊಂದರೆಗಳಿಂದ ಕೆಲವು ಭಾಗಗಳಿಗೆ ಕೃಷಿಗೆ ನೀರು ತಲುಪಿಲ್ಲ ತಡವಾಗಿ ನೀರು ತಲುಪುತ್ತದೆ. ಇದನ್ನು ನೀರಾವರಿ ಇಲಾಖೆ ಅಧಿಕಾರಿಗಳು ರೈತರಿಗೆ ಮನವರಿಕೆ ಮಾಡಿಕೊಡ ಬೇಕು. ಇಲ್ಲಾವಾದಲ್ಲಿ ರೈತರಿಂದ ಹಲವಾರು ದೂರು ಬರುತ್ತದೆ ಎಂದರು.