ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ನವೆಂಬರ್ 29 ರಂದು ಕೋಲಾರ ಜಿಲ್ಲೆಯಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿರುತ್ತದೆ.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸಿಟ್ಟಿಂಗ್ಸ್ ಸಂದರ್ಭದಲ್ಲಿ ಕೋಲಾರ ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲಾಗುವುದು. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನವೆಂಬರ್ 29 ರಂದು ಸಾರ್ವಜನಿಕರಿಂದ ದೂರುಗಳು / ಅಹವಾಲುಗಳನ್ನು ಸಹ ಸ್ವೀಕರಿಸಲಾಗುವುದು. ಸಾರ್ವಜನಿಕರು ನಿಗದಿತ ದಿನಾಂಕದಂದು ಆಯೋಗದ ಹಂಗಾಮಿ ಅಧ್ಯಕ್ಷರು ಹಾಗೂ ಮಾನ್ಯ ಸದಸ್ಯರುಗಳನ್ನು ಸಂಪರ್ಕಿಸಿ ದೂರುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ (ಪ್ರ) ಎ. ದಿನೇಶ್ ಸಂಪತ್ ರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.