ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅವಧಿ ವಿಸ್ತರಣೆ

0
49
Share this Article
0
(0)
Views: 1

ಬೆಂಗಳೂರು ನಗರ ಜಿಲ್ಲೆ, ಜುಲೈ 10 

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 2023-24ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಪ್ರಸ್ತುತ ಮಾಧ್ಯಮಿಕ / ಪ್ರೌಢಶಾಲೆಯಲ್ಲಿ ಓದುತ್ತಿರುವ ಅರ್ಹ ಕ್ರೀಡಾಪಟುಗಳಿಂದ (6 ರಿಂದ 10ನೇ ತರಗತಿ) ಸೇವಾಸಿಂಧು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಜುಲೈ 20, 2024ರ ವರಗೆ ವಿಸ್ತರಿಸಲಾಗಿದೆ.

ಆಸಕ್ತ ಕ್ರೀಡಾ ವಿದ್ಯಾರ್ಥಿಗಳು ವೆಬ್ ಸೈಟ್ https://sevasindhuservices.karnataka.gov.in ನಲ್ಲಿ ಜುಲೈ 20 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು .

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಗೇಟ್ ನಂ.12, ಕೊಠಡಿ ಸಂಖ್ಯೆ :17-18, ಶ್ರೀಕಂಠೀರವ ಕ್ರೀಡಾಂಗಣ, ಕಸ್ತೂರಿಬಾ ರಸ್ತೆ, ಬೆಂಗಳೂರು -560001 ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 080-22239771 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here