ಕೇಂದ್ರ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯ ಉತ್ಕೃಷ್ಟತಾ ಕೇಂದ್ರದಲ್ಲಿ ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್‍ನ್ನು ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರ, ವಿದ್ಯಾನಗರ, ಬೆಂಗಳೂರು ಇಲ್ಲಿಗೆ ಮಂಜೂರು ಮಾಡಿದ್ದು, ಈ ಕೇಂದ್ರಕ್ಕೆ ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಆಧಾರದ ಮೇಲೆ Young Professional ಮತ್ತು Masseur ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಕೋರಿದೆ. ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಛೇರಿ ಅಥವಾ ಆಯುಕ್ತರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು-01 ಈ ವಿಳಾಸದಿಂದ ಅರ್ಜಿಗಳನ್ನು ಪಡೆದುಕೊಂಡು ಡಿಸೆಂಬರ್ 7 ರ ಸಂಜೆ 5.00 ಗಂಟೆಯೊಳಗೆ ಇ-ಮೇಲ್ dyesdept@gmail.com ಗೆ ಸಲ್ಲಿಸುವುದು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯಾವುದೇ ಕಾರಣ ನೀಡದೇ ಸದರಿ ಜಾಹೀರಾತನ್ನು ಹಿಂಪಡೆಯುವ ಅಧಿಕಾರವನ್ನು ಹೊಂದಿರುತ್ತದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.