ಬೆಂಗಳೂರು ನಗರ ಜಿಲ್ಲೆ, ಸೆಪ್ಟೆಂಬರ್ 09
ಜಿಲ್ಲಾ ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಇಲ್ಲಿ ಖಾಲಿ ಇರುವ ಗೃಹರಕ್ಷಕ ಸ್ವಯಂ ಸೇವಾ ಸದಸ್ಯರ ಸ‍್ಥಾನಗಳನ್ನು ಭರ್ತಿ ಮಾಡಲು ಬೆಂಗಳೂರು ನಗರದ ಸ್ಥಳೀಯ ಆಸಕ್ತ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನಿಷ್ಠ 19 ವರ್ಷ ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿ ಒಳಗಿರಬೇಕು. ಬೆಂಗಳೂರು ನಗರದ ಸ್ಥಳೀಯ ನಾಗರಿಕರು ( ವಾಸ ಸ‍್ಥಳದ ಅಧಿಕೃತ ದಾಖಲೆ ಹೊಮದಿರಬೇಕು) ಬೆಂಗಳೂರು ದಕ್ಷಿಣ ಜಿಲ್ಲಾ ಕಛೇರಿಯ ವ್ಯಾಪ್ತಿಗೆ ಒಳಪಡುವ ವಿಳಾಸದಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಗೃಹರಕ್ಷಣೆ ಸದಸ್ಯತ್ವವು ಖಾಯಂ ಹುದ್ದೆ ಆಗಿರುವುದಿಲ್ಲ.
ಗೃಹ ರಕ್ಷಕ ಸದಸ್ಯತ್ವ ಅರ್ಜಿ ನಮೂನೆಗಳನ್ನು ಸಮಾದೇಷ್ಟರವರ ಕಛೇರಿ, ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಶೇಷಾದ್ರ ರಸ್ತೆ, ಫ್ರೀಡಂ ಪಾರ್ಕ್ ಹತ್ತಿರ, ಬೆಂಗಳೂರು ಇಲ್ಲಿ ಸೆಪ್ಟೆಂಬರ್ 11 ರಿಂದ 25 ರವರೆಗೆ (ಕೆಲಸದ ದಿನಗಳಲ್ಲಿ) ಉಚಿತವಾಗಿ ವೀತರಿಸಲಾಗುವುದು.
ಅರ್ಜಿಯನ್ನು ಪಡೆಯಲು ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಸ್ಥಳೀಯ ವಾಸ ಸ‍್ಥಳದ ದಾಖಲೆಯ ಆಧಾರ್ ಕಾರ್ಡ್‍್ / ಚುನಾವಣಾ ಗುರುತಿನ ಚೀಟಿ / ಇತ್ತೀಚಿನ ಗ್ಯಾಸ್ ರಸೀದಿ – ಮೂಲ ಪ್ರತಿಗಳನ್ನು ಹಾಜರುಪಡಿಸಿ ಅರ್ಜಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22261012 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಗೃಹರಕ್ಷಕ ದಳದ ಕಮಾಂಡೆಂಟ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .