ಬೆಂಗಳೂರು ನಗರ ಜಿಲ್ಲೆ, ಜುಲೈ 15:
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮೀ ಯೋಜನೆಯಡಿ ಪ್ರಯೋಜನೆ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮೀ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ National Portal For Transgender Persons ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ. ಆದ್ದರಿಂದ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಉಪ ನಿದೇರ್ಶಕರ ಕಛೇರಿ, ಮಹಿಳಾ ಮತ್ತು ಮ್ಕಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಕೀರ್ಣ, ಡಾ.ಎಂ.ಎಚ್. ಮರಿಗೌಡ ರಸ್ತೆ, ಬೆಂಗಳೂರು-560 029 ಇಲ್ಲಿ ಭೇಟಿ ನೀಡಿ ಗೃಹ ಲಕ್ಷ್ಮೀ ಯೋಜನೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್–ಜೆಂಡರ್ ಗುರುತಿನ ಚೀಟಿ, ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಆಧಾರ್ ಕಾರ್ಡ್ ನ್ನು ಕಡ್ಡಾಯವಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-29578688 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಮಹಿಳಾ ಮತ್ತು ಮ್ಕಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.