ಬಳ್ಳಾರಿ,ಜೂ.14:
ಪ್ರಸ್ತಕ ಸಾಲಿಗೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವತಿಯಿಂದ ವಿಜಯನಗರ ಜಿಲ್ಲೆ, ಬಳ್ಳಾರಿ ಜಿಲ್ಲೆ ಹಾಗೂ ಕೊಪ್ಪಳ ಜಿಲ್ಲೆಗಳಿಂದ ಗೋಡಂಬಿ ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ.ಮಂಜುನಾಥ ಭಾನುವಳ್ಳಿ ಅವರು ತಿಳಿಸಿದ್ದಾರೆ.
ಆಸಕ್ತ ರೈತರು ತಮ್ಮ ಜಮೀನಿನ ಮೂಲ ಪಹಣಿ ಪತ್ರ, ಆಧಾರ್ ಕಾರ್ಡ್‍ನ ಜೆರಾಕ್ಸ್ ಪ್ರತಿ, ಪಾಸ್‍ಪೋರ್ಟ್ ಅಳತೆಯ ಫೋಟೋ-2, ಬ್ಯಾಂಕ್ ಪಾಸ್ ಪುಸ್ತಕದ ಜೇರಾಕ್ಸ್ ಹಾಗೂ ಗ್ರಾಮ ಪಂಚಾಯತಿಯಿಂದ ದೃಢೀಕರಿಸಲ್ಪಟ್ಟ ರಹವಾಸಿ (ನಿವಾಸಿ) ಪತ್ರದ ಜೊತೆಗೆ ಕೇಂದ್ರವನ್ನು ಸಂಪರ್ಕಿಸಿ ನಿಗಧಿತ ನಮೂನೆಯ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು.
ಚೆನ್ನಾಗಿ ನೀರು ಬಸಿದು ಹೋಗುವ ಕೆಂಪು, ಮರಳು ಮಿಶ್ರಿತ ಗೂಡುಮಣ್ಣಿನ ಜಮೀನು ಹೊಂದಿರುವ ರೈತರು ಹಾಗೂ ಮೊದಲು ಬಂದಂತಹ ರೈತರಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ. ಮಾಹಿತಿಗಾಗಿ ವೆಬ್‍ಸೈಟ್ https://dccd.gov.in ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಸುನೀತಾ ಎನ್.ಹೆಚ್ ಅವರ ಮೊ.7338479441 ಹಾಗೂ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ.ಮಂಜುನಾಥ ಭಾನುವಳ್ಳಿ ಅವರ ಮೊ.9480696336, ದೂ.08399-240092 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.