ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ

0
40
Share this Article
0
(0)
Views: 1

ಕಾರವಾರ.ಆ.9

ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಪ್ರಯುಕ್ತ ಗೌರಿ ಹಾಗೂ ಗಣೇಶನ ವಿಗ್ರಹದ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ ಪೂಜಿಸಿ ಕೆರೆ / ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ಪ್ರತಿಮೆಗಳ ವಿಸರ್ಜನೆಯಿಂದ ನೈಸರ್ಗಿಕ ಜಲಮೂಲಗಳಲ್ಲಿ ಜಲ ಮಾಲಿನ್ಯ ಉಂಟಾಗಲಿದೆ.

 ಉಚ್ಛ ನ್ಯಾಯಾಲಯದ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆಯಲ್ಲಿ ತಿಳಿಸಿರುವಂತೆ , ಸದರಿ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಜಲ ಮಾಲಿನ್ಯ ತಡೆಗಟ್ಟುವ ಕುರಿತು ತೆಗೆದುಕೊಳ್ಳಬೇಕಾದ ಕ್ರಮಗಳು: ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ/ಸಂಸ್ಥೆಗಳಿಗೆ ವ್ಯಾಪಾರ ಲೈಸನ್ಸ್ ನೀಡದಿರಲು ಮತ್ತು ಲೈಸೆನ್ಸ್ ಪಡೆಯದೇ ಅನಧಿಕೃತವಾಗಿ ತಯಾರಿ/ಮಾರಾಟ ಮಾಡುವ ವ್ಯಕ್ತಿ/ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸುವುದು. ಸದರಿ ಅಧಿಸೂಚನೆಯ ಅನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್ / ಬಣ್ಣ ಲೇಪಿತ ವಿಗ್ರಹಗಳನ್ನು ಯಾವುದೇ ನದಿ / ಕಾಲುವೆ / ಬಾವಿಗಳಲ್ಲಿ ವಿಸರ್ಜಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಭಾರತೀಯ ನ್ಯಾಯ ಸಂಹಿತೆ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸುವುದು. 

ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ವಿಸರ್ಜಿಸುವುದು. ನೈಸರ್ಗಿಕ / ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್ಗಳಲ್ಲಿ/ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಹಾಗೂ ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲು ಕ್ರಮ ವಹಿಸುವುದು. ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಈ ಅನುಮತಿ ಪತ್ರಗಳಲ್ಲಿ ಲೈಸನ್ಸ್ ನೀಡುವ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ಫ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸುವುದು. ನಿರ್ದಿಷ್ಠ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲಮೂಲಗಳನ್ನು ನಿಗಧಿಪಡಿಸುವುದು ಮತ್ತು ಈ ಬಗ್ಗೆ ಸೂಕ್ತ ಪ್ರಕಟಣೆಯನ್ನು ಹೊರಡಿಸುವುದು. ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಿ.ಒ.ಪಿ ಮತ್ತು ಬಣ್ಣದ ವಿಗ್ರಹಗಳನ್ನು ತನಿಖೆ ಮಾಡಿ ಸುಪರ್ಧಿಗೆ ತೆಗೆದುಕೊಳ್ಳಲು ಕ್ರಮ ವಹಿಸುವುದು.

ಪರಿಸರ ಮತ್ತು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪರಿಸರ ದೃಷ್ಟಿಯಿಂದ , ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗಾಗಿ ಉತ್ತರ ಕನ್ನಡ ಜಿಲ್ಲೆಯ ನಾಗರಿಕರು ಸಹಕರಿಸಿ ಪರಿಸರ ಸ್ನೇಹಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸುವಂತೆ ಕ.ರಾ.ಮಾ.ನಿ.ಮಂಡಳಿಯ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here