ಬೆಂಗಳೂರು ನಗರ ಜಿಲ್ಲಾ ಪ್ರವಾಸದಲ್ಲಿರುವ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ಇಂದು ಆನೇಕಲ್ ತಾಲ್ಲೂಕಿನ ವಡ್ಡರಪಾಳ್ಯದಲ್ಲಿರುವ ಅಕ್ಷಯ ಪಾತ್ರ ಫೌಂಡೇಶನ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾಸ್ತೇನಹಳ್ಳಿಯಲ್ಲಿರುವ ಅಂಗನವಾಡಿ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬೆಂಗಳೂರು ದಕ್ಷಿಣದ ಬೊಮ್ಮನಹಳ್ಳಿಯಲ್ಲಿರುವ ಸಗಟು ಮಳಿಗೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೌಲಭ್ಯಗಳ ಕುರಿತು ಗುತ್ತಿಗೆದಾರರಿಂದ ಮಾಹಿತಿ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯರುಗಳಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ. ದೊಡ್ಡಲಿಂಗಣ್ಣವರ, ಎ. ರೋಹಿಣಿ ಪ್ರಿಯಾ, ಕೆ.ಎಸ್ ವಿಜಯಲಕ್ಷ್ಮಿ, ಪಂಜಾಬ್ ರಾಜ್ಯ ಆಹಾರ ಆಯೋಗದ ಅಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಪ್ರೀತಿ ಚಂದ್ರಶೇಖರ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.