ಕಾರವಾರ, ಜು.20
ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.21 ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅಂದು ಮಧ್ಯಾಹ್ನ 2.15 ಗಂಟೆಗೆ ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಅತಿವೃಷ್ಠಿಯಿಂದಾದ ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ಹಾಗೂ ಗುಡ್ಡ ಕುಸಿತದಿಂದ ಸಂತ್ರಸ್ತರಾದ ಕುಟುಂಬದವರನ್ನು ಭೇಟಿ ಮಾಡಲಿದ್ದಾರೆ.
ನಂತರ ಸಂಜೆ 4.45 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ನೌಕಾನೆಲೆ, ಕೆಪಿಸಿಎಲ್ ಮತ್ತು ಎನ್ಪಿಸಿಎಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ ಪ್ರಕಟಣೆ ತಿಳಿಸಿದೆ.