ಧಾರವಾಡ ಜೂನ್.04:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಎ-ಫೋಕಸ್, ಧಾರವಾಡ, ಧಾರವಾಡ ವಕೀಲರ ಸಂಘ, ವಾಲ್ಮಿ, ಕೃಷಿ ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಕಲ್ಮೇಶ್ವರ ದೇವಸ್ಥಾನ ಟ್ರಸ್ಟ್ ಕಮೀಟಿ, ಕೆಲಗೇರಿ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 5, 2024 ರಂದು ಬೆಳಿಗ್ಗೆ 9.45 ಗಂಟೆಗೆ ಕಲಗೇರಿ ಕೆರೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳನ್ನು ನೇಡುವ ಕಾರ್ಯಕ್ರಮವನ್ನು ಹಮ್ಮಿಕೊಳಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೃಷಿ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಪಿ.ಎಲ್.ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು.
ಅತಿಥಿಗಳಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿವೇಕ ಕವರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳಾ ವಿ. ಹೆಚ್, ನಿವೃತ್ತ ಜಿಲ್ಲಾ ನ್ಯಾಯಾಧೀಶ ಹಾಗೂ ಎ-ಫೋಕಸ್ ಅಧ್ಯಕ್ಷ ಎಸ್. ಎಚ್.ಮಿಟ್ಟಲಕೋಡ, ವಾಲ್ಮಿ ನಿರ್ದೇಶಕ ರಾಜೇಂದ್ರ ಪೋದ್ದಾರ, ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತ ಆನಂದ ಕಾಂಬಳೆ, ಧಾರವಾಡ ವಕೀಲರ ಸಂಘದ ಅಧ್ಯಕ್ಷ ಅಶೋಕ ವ್ಹಿ. ಏಣಗಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಜಗದೀಶ ಐ. ಎಚ್, ಕಲ್ಮೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯ ಅಧ್ಯಕ್ಷ ರುದ್ರಗೌಡ ವ್ಹಿ. ಪಾಟೀಲ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.