Views: 1
ಮಡಿಕೇರಿ ಮೇ.30:-
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಪರಿಷತ್ತಿಗೆ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಂದ ನಡೆಯುವ ದ್ವೈವಾರ್ಷಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜೂನ್, 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಕೋರಿದೆ.
ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಸ್ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂನ್, 03 ರಂದು ವಿಶೇಷ ಸಾಂದರ್ಭಿಕ ರಜೆ ಯನ್ನು ಮಂಜೂರು ಮಾಡಿ ಆದೇಶಿಸಿದೆ.
ಭಾರತ ಚುನಾವಣಾ ಆಯೋಗದ ಆದೇಶದಂತೆ ಜೂನ್, 03 ರಂದು ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(ಎಪಿಕ್) ಯನ್ನು ಮುಖ್ಯ ದಾಖಲಾತಿಯಾಗಿ ಹಾಜರುಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಎಪಿಕ್ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳಾದ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಇಂಡಿಯನ್ ಪಾಸ್ಪೋರ್ಟ್, ಸರ್ವೀಸ್ ಗುರುತಿನ ಚೀಟಿ(ನೌಕರರು ಕೇಂದ್ರ/ ರಾಜ್ಯ ಸರ್ಕಾರ ಪಬ್ಲಿಕ್ ಸೆಕ್ಟರ್, ಲೋಕಲ್ ಬಾಡಿಸ್ ಇತರ ಪ್ರೈವೆಟ್ ಇಂಡಸ್ಟ್ರೀಯಲ್ ಹೌಸಸ್). ಅಪಿಷಿಯಲ್ ಗುರುತಿನ ಚೀಟಿ (ಎಂ.ಪಿ, ಎಂ.ಎಲ್ಎ, ಎಂಎಲ್ಸಿ), ಶಿಕ್ಷಣ ಸಂಸ್ಥೆಯಿಂದ ನೀಡಿರುವ ಸರ್ವಿಸ್ ಗುರುತಿನ ಚೀಟಿ, ವಿಶ್ವವಿದ್ಯಾನಿಲಯದಿಂದ ನೀಡಿರುವ ಪ್ರಮಾಣ ಪತ್ರ, ವಿಶೇಷಚೇತನ ಗುರುತಿನ ಚೀಟಿ, ಯುನಿಕ್ ಡಿಸಾಬಿಲಿಟಿ ಗುರುತಿನ ಚೀಟಿ(ಯುಡಿಐಡಿ) ಈ ಪೈಕಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ ಎಂದು ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.