ಬಳ್ಳಾರಿ,ಜೂ.12:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸಾಂಸ್ಕೃತಿಕ ಸಮುಚ್ಛಯ ನಿರ್ವಹಣಾ ಸಮಿತಿ ವತಿಯಿಂದ ಕಲಾ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜೂನ್ 15 ರಂದು ಸಂಜೆ 06.30 ಗಂಟೆಗೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ನಾಡೋಜ ಸುಭದ್ರಮ್ಮ ಮನ್ಸೂರು ಬಯಲು ರಂಗಮಂದಿರ ಸಾಂಸ್ಕೃತಿಕ ಸಮುಚ್ಛಯದಲ್ಲಿ ‘ತಿಂಗಳ ಸೊಬಗು’ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಸಿರುಗುಪ್ಪದ ಕೆ.ನರಸಿಂಹಮೂರ್ತಿ ಅವರಿಂದ ಹಾಸ್ಯ ಚಟಾಕಿಗಳು, ಸುಜಾತ ಕಲಾ ಟ್ರಸ್ಟ್ ವತಿಯಿಂದ ಸಮೂಹ ನೃತ್ಯ ಮತ್ತು ಜೀ ಕನ್ನಡ ಸರಿಗಮಪ ಸೀಜನ್ 19 ಸ್ಪರ್ಧಾಳು ಕುಮಾರಿ ಸೃಷ್ಠಿ ಸುರೇಶ್ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ಇರಲಿವೆ.
ಸಾರ್ವಜನಿಕರಿಗೆ ಪ್ರವೇಶ ಮುಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ವೀಕ್ಷಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಕೋರಲಾಗಿದೆ.