ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

0
49
Share this Article
0
(0)
Views: 0
 
ದಾವಣಗೆರೆ, ಮೇ.29:
 
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ರಾಜ್ಯದ ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಈ ಸ್ಥಳಗಳಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದೆ. ಈ ತರಬೇತಿ ಸಂಸ್ಥೆಗಳ ಮೂಲಕ ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ ,ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳ ಅವಧಿಯ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಯನ್ನು 2024 ರ ಜುಲೈ ಮಾಹೆಯಲ್ಲಿ ಪ್ರಾರಂಭಿಸಲಾಗುತ್ತಿದ್ದು, ಈ ತರಬೇತಿಯನ್ನು ಪಡೆಯಲಿಚ್ಚಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
 
ಡಿ.ಸಿ.ಎಂ. ತರಬೇತಿಯ ಅರ್ಜಿ ಫಾರಂ ಮತ್ತು ವಿವರಣಾ ಪುಸ್ತಕವನ್ನು ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ, #2532, “ಕಲಾಪ್ರಕಾಶ ವೃಂದ”, 1ನೇ ಮಹಡಿ, ವಿನೋಬನಗರ 2ನೇ ಮುಖ್ಯರಸ್ತೆ, ಎಂ.ಸಿ.ಸಿ ‘ಎ’ ಬ್ಲಾಕ್, ದಾವಣಗೆರೆ ಈ ಸಂಸ್ಥೆಯಿಂದ ಪಡೆಯಬಹುದು. ತರಬೇತಿಗೆ ಅರ್ಜಿ ಸಲ್ಲಿಸಲು ಜೂನ್ 15 ಕೊನೆಯದಿನವಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಆಯಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237672ನ್ನು ಸಂಪರ್ಕಿಸಲು ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಲಪ್ಪ ಕೋಡಿಹಳ್ಳಿ ತಿಳಿಸಿದ್ದಾರೆ.
 
 
 
 

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a reply

Please enter your comment!
Please enter your name here