Views: 0
ದಾವಣಗೆರೆ, ಮೇ.29:
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಜೂನ್ 4 ರಂದು ಬೆಳಿಗ್ಗೆ 6 ಗಂಟೆಯಿಂದ ಜೂನ್ 5ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಆದೇಶಿಸಿರುತ್ತಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಮತಎಣಿಕೆ ಕಾರ್ಯ ದಾವಣಗೆರೆ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ಜೂನ್ 4 ರಂದು ನಡೆಯಲಿದೆ. ಗೆದ್ದಂತಹ ರಾಜಕೀಯ ಅಭ್ಯರ್ಥಿಗಳ ಪರವಾಗಿ ಕಾರ್ಯಕರ್ತರು ಗುಂಪು ಸೇರಿ ಪಟಾಕಿ ಹೊಡೆಯುವುದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟು ಮಾಡುವುದು ನಿಷಿದ್ದ ಹಾಗೂ ಪಟಾಕಿ ಸಿಡಿಸುವಂತಿಲ್ಲ ಮತ್ತು ಗುಂಪು ಸೇರುವಂತಿಲ್ಲ.