ಬೆಂಗಳೂರು, ಸೆಪ್ಟೆಂಬರ್ 17
ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಜಿಕೆವಿಕೆ ಆವರಣದಲ್ಲಿ ನವೆಂಬರ್ 14 ರಿಂದ 17 ರವರೆಗೆ “ ಹವಾಮಾನ ಚತುರ ಡಿಜಿಟಲ್ ಕೃಷಿ” ಎಂಬ ಘೋಷವಾಕ್ಯದೊಂದಿಗೆ “ಕೃಷಿ ಮೇಳ- 2024” ನ್ನು ಆಯೋಜಿಸಲಾಗಿದೆ.
ಕೃಷಿ ಮೇಳದಲ್ಲಿ ನಾಲ್ಕು ನೂತನ ತಳಿಗಳು ಮತ್ತು ಹತ್ತೊಂಭತ್ತು ಹೊಸ ತಾಂತ್ರಿಕತೆಗಳನ್ನು ಬಿಡುಗಡೆ ಮಾಡಲಾಗುವುದು. ಮಳಿಗೆಗಳ ಕಾಯ್ದಿರಿಸುವಿಕೆಯು ಸೆಪ್ಟೆಂಬರ್ 23 ರಿಂದ ಪ್ರಾರಂಭವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-23638883 / 23330153 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.